Mysore
24
haze

Social Media

ಶನಿವಾರ, 24 ಜನವರಿ 2026
Light
Dark

ಸ್ಮೃತಿ ಮಂದಾನ ಮತ್ತೊಂದು ದಾಖಲೆ : ಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ 2ನೇ ಬ್ಯಾಟರ್

Smriti Mandhana

ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಮಹಿಳಾ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂದಾನ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 1ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್‌ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್‌ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 4500 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ 103 ಏಕದಿನ ಇನಿಂಗ್ಸ್‌ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂದಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.

ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರಿಸಿದರೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು

Tags:
error: Content is protected !!