Smriti Mandhana
ಮುಂಬೈ : ಮಹಿಳಾ ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಅವರ ಪರಾಕ್ರಮ ಮುಂದುವರಿದಿದೆ. ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಸ್ಮೃತಿ ಇದೀಗ ಏಕದಿನ ಕ್ರಿಕೆಟ್‌ನಲ್ಲೂ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 10 ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಮಹಿಳಾ ಕ್ರಿಕೆಟ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಸ್ಮೃತಿ ಮಂದಾನ ಇದೀಗ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಈ ಮೈಲುಗಲ್ಲು ದಾಟುವುದರೊಂದಿಗೆ ಈ ಸಾಧನೆ ಮಾಡಿದ ಭಾರತದ 1ನೇ ಮಹಿಳಾ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕಳಾಗಿ ಕಣಕ್ಕಿಳಿದ ಸ್ಮೃತಿ ಮಂಧಾನ 24 ಎಸೆತಗಳಲ್ಲಿ 5 ಫೋರ್‌ಗಳೊಂದಿಗೆ 28 ರನ್ ಬಾರಿಸಿದ್ದರು. ಈ 28 ರನ್‌ಗಳೊಂದಿಗೆ ಸ್ಮೃತಿ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 4500 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭಾರತ ಮಹಿಳಾ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್. ಭಾರತದ ಪರ 211 ಏಕದಿನ ಇನಿಂಗ್ಸ್ ಆಡಿರುವ ಮಿಥಾಲಿ 7 ಶತಕ ಹಾಗೂ 64 ಅರ್ಧಶತಕಗೊಂದಿಗೆ 7805 ರನ್ ಕಲೆಹಾಕಿದ್ದಾರೆ. ಈ ಮೂಲಕ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದೀಗ 103 ಏಕದಿನ ಇನಿಂಗ್ಸ್‌ಗಳ ಮೂಲಕ 11 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿರುವ ಸ್ಮೃತಿ ಮಂದಾನ ಒಟ್ಟು 4501 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸ್ಮೃತಿ ತಮ್ಮದಾಗಿಸಿಕೊಂಡಿದ್ದಾರೆ.
ಅಂದಹಾಗೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಕೇವಲ 10 ಆಟಗಾರ್ತಿಯರು ಮಾತ್ರ 4500+ ರನ್ ಗಳಿಸಿದ್ದಾರೆ. ಇವರಲ್ಲಿ ಮಿಥಾಲಿ ರಾಜ್ ಅಗ್ರಸ್ಥಾನದಲ್ಲಿದ್ದರೆ, ಸ್ಮೃತಿ ಮಂದಾನ 10ನೇ ಸ್ಥಾನದಲ್ಲಿದ್ದಾರೆ. ಸದ್ಯ ಉತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ಇದೇ ರೀತಿ ಬ್ಯಾಟಿಂಗ್ ಮುಂದುವರಿಸಿದರೆ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಬಹುದು
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…