ಕ್ರೀಡೆ

ಟಿ20 ವಿಶ್ವಕಪ್‌ : ಅತಿ ಹೆಚ್ಚು ರನ್​ಗಳಿಸಿ ಮೊದಲ ಸ್ಥಾನಕ್ಕೇರಿದ ಸ್ಮೃತಿ ಮಂಧಾನ

ನವದೆಹಲಿ: ಐರ್ಲೆಂಡ್​ ಎದುರು ಭಾರತೀಯ ವನಿತೆಯರು ವರುಣನ ಅಡ್ಡಿಯ ನಡುವೆಯೂ ಗೆಲುವು ಸಾಧಿಸಿದ್ದು, ಬಿ ಗುಂಪಿನಿಂದ ಸೆಮೀಸ್​ಗೆ ಪ್ರವೇಶಿಸಿದೆ. ಮಳೆಯ ಪರಿಣಾಮ 5 ರನ್​ನಿಂದ ಐರ್ಲೆಂಡ್​ ಸೋಲನುಭವಿಸಿತು. ಬಿರುಸಿನ ಬ್ಯಾಟ್ಸ್‌ಮನ್‌ ಸ್ಮೃತಿ ಮಂಧಾನ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಭಾರತದ ಪರ ಮಂಧಾನ 87 ರನ್ ಗಳಿಸಿದ್ದಾರೆ. ಈ ಮೂಲಕ ಮಂಧಾನ 2023ರ ಟಿ20 ವಿಶ್ವಕಪ್​ನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.


ಆಸ್ಟ್ರೇಲಿಯಾದ ಅಲಿಸ್ಸಾ ಹೀಲಿ ಅವರು ಮೂರು ಪಂದ್ಯದಿಂದ 54,37 ಮತ್ತು 55 ರನ್​ನಿಂದ ಒಟ್ಟು 146 ರನ್​ಗಳಿಸಿದ್ದಾರೆ. ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಪಾಕಿಸ್ತಾನದ ಎದುರಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ನಂತರದ ಮೂರು ಪಂದ್ಯದಲ್ಲಿ 87, 10 ಮತ್ತು 52 ರನ್​ನಿಂದ ಒಟ್ಟು 149 ಮೊತ್ತ ಕಲೆ ಹಾಕಿದ್ದಾರೆ. ಈ ಮೂಲಕ 2023ರ ಟಿ20 ವಿಶ್ವಕಪ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದವರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago