ಕ್ರೀಡೆ

ಐಸಿಸಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಪಡೆದ ಸ್ಮೃತಿ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾರತದ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದಾನ ಭಾಜನರಾಗಿದ್ದಾರೆ.

2024ರ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾಜನರಾಗುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ 4ನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ ಏಕದಿನ ಕ್ರಿಕೆಟ್‌ನಲ್ಲಿ 13 ಇನ್ನಿಂಗ್ಸ್‌ಗಳನ್ನು ಆಡಿದ ಮಂದಾನ 4 ಭರ್ಜರಿ ಶತಕಗಳೊಂದಿಗೆ ಒಟ್ಟು 747 ರನ್‌ ಕಲಾಹಾಕಿದ್ದರು. ಆ ಮೂಲಕ ವರ್ಷದ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್‌ ಕಲೆ ಹಾಕಿದ ಮಹಿಳಾ ಕ್ರಿಕೆಟರ್‌ಗಳ ಸಾಲಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದರು.

ಇದಕ್ಕೂ ಮುನ್ನ 2018ರಲ್ಲಿ ಮೊದಲ ಬಾರಿಗೆ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿ ಗೆದ್ದಿದ್ದ ಮಂದಾನ, ಅದೇ ವರ್ಷ 2018ರ ಮಹಿಳಾ ಕ್ರಿಕೆಟರ್‌ ಗೌರವಕ್ಕೂ ಭಾಜನರಾಗಿದ್ದರು. ನಂತರ 2021 ಮತ್ತು ಈಗ 2024ರಲ್ಲಿ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago