ಲಂಡನ್ : ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ (ಡಬ್ಲ್ಯುಟಿಸಿ) ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡಿದೆ.
ಇಲ್ಲಿನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 212ರನ್‌ಗಳಿಗೆ ಆಲ್ ಔಟ್ ಆಯಿತು. ಬಳಿಕ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ 138 ರನ್‌ಗಳಿಗೆ ಔಟ್ ಆಯಿತು. ನಂತರ ಎರಡನೇ ಇನ್ನಿಂಗ್ಸ್ ಮಾಡಿದ ಆಸ್ಟ್ರೇಲಿಯಾ 207 ರನ್‌ಗಳಿಗೆ ಆಲ್ ಔಟ್ ಆಗಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 282 ರನ್‌ಗಳ ಗುರಿ ನೀಡಿತ್ತು.
ಈ ಗುರಿ ಬೆನ್ನೆತ್ತುವಲ್ಲಿ ಸಫಲವಾದ ತೆಂಬಾ ಬವುಮಾ ಪಡೆಗೆ ಆರಂಭಿಕ ಏಡನ್ ಮರ್ಕರಂ ಆಸರೆಯಾದರೆ. ಅವರ ಶತಕದಾಟದ ಬಲದಿಂದ ಹರಿಣಗಳ ನಾಡಿನ ತಂಡ ಐದು ವಿಕೆಟ್‌ಗಳ ನಷ್ಟಕ್ಕೆ 285 ರನ್‌ಗಳಿಸಿ ಗೆಲವಿನ ನಗೆ ಬೀರಿತು.





