ಕ್ರೀಡೆ

WTL Final | ಚಾಂಪಿಯನ್‌ ಪಟ್ಟಕ್ಕೇರಿದ ದ.ಆಫ್ರಿಕಾ

ಲಂಡನ್‌ : ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ (ಡಬ್ಲ್ಯುಟಿಸಿ) ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಬರ ನೀಗಿಸಿಕೊಂಡಿದೆ.

ಇಲ್ಲಿನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಆಸ್ಟ್ರೇಲಿಯಾ 212ರನ್‌ಗಳಿಗೆ ಆಲ್‌ ಔಟ್‌ ಆಯಿತು. ಬಳಿಕ ಇನ್ನಿಂಗ್ಸ್‌ ಆರಂಭಿಸಿದ ದಕ್ಷಿಣ ಆಫ್ರಿಕಾ 138 ರನ್‌ಗಳಿಗೆ ಔಟ್‌ ಆಯಿತು. ನಂತರ ಎರಡನೇ ಇನ್ನಿಂಗ್ಸ್‌ ಮಾಡಿದ ಆಸ್ಟ್ರೇಲಿಯಾ 207 ರನ್‌ಗಳಿಗೆ ಆಲ್‌ ಔಟ್‌ ಆಗಿ ದಕ್ಷಿಣ ಆಫ್ರಿಕಾಗೆ ಗೆಲ್ಲಲು 282 ರನ್‌ಗಳ ಗುರಿ ನೀಡಿತ್ತು.

ಈ ಗುರಿ ಬೆನ್ನೆತ್ತುವಲ್ಲಿ ಸಫಲವಾದ ತೆಂಬಾ ಬವುಮಾ ಪಡೆಗೆ ಆರಂಭಿಕ ಏಡನ್‌ ಮರ್ಕರಂ ಆಸರೆಯಾದರೆ. ಅವರ ಶತಕದಾಟದ ಬಲದಿಂದ ಹರಿಣಗಳ ನಾಡಿನ ತಂಡ ಐದು ವಿಕೆಟ್‌ಗಳ ನಷ್ಟಕ್ಕೆ 285 ರನ್‌ಗಳಿಸಿ ಗೆಲವಿನ ನಗೆ ಬೀರಿತು.

ಆಂದೋಲನ ಡೆಸ್ಕ್

Recent Posts

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

3 mins ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

11 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

15 mins ago

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

7 hours ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

10 hours ago