ಕ್ರೀಡೆ

IPL 2024: ಹೈದರಾಬಾದ್‌ ಸಂಘಟಿತ ಆಟಕ್ಕೆ ತಲೆಬಾಗಿದ ಸಿಎಸ್‌ಕೆ: ಚೆನ್ನೈಗೆ ಸತತ ಎರಡನೇ ಸೋಲು!

ಹೈದರಾಬಾದ್:‌ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ಪ್ರದರ್ಶನ ಮೂಲಕ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕಟ್ಟಿಹಾಕುವಲ್ಲಿ ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಎಸ್‌ಆರ್‌ಎಚ್‌ ತಂಡ ಸಿಎಸ್‌ಕೆ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆ ಹಾಕಿದೆ. ಈ ಸಾಧಾರಣ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ 18.1 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 166 ರನ್‌ ಕೆಲಹಾಕಿ ಗೆದ್ದು ಬೀಗಿತು.

ಸಿಎಸ್‌ಕೆ ಇನ್ನಿಂಗ್ಸ್‌: ಆರಂಭಿಕ ದಾಂಡಿಗರಾಗಿ ಬಂದ ನಾಯಕ ಋತುರಾಜ್ ಗಾಯಕ್ವಾಡ್ 26, ರಚಿನ್ ರವೀಂದ್ರ 12 ರನ್‌ಗೆ ಔಟಾದರು. ಬಳಿಕ ಬಂದ ಎಡಗೈ ದಾಂಡಿಗ ಶಿವಂ ದುಬೆ 24 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ಸಹಿತ 45 ರನ್‌ ಬಾರಿಸಿದ್ದೇ ಸಿಎಸ್‌ಕೆ ಪರ ಅತ್ಯಧಿಕ ರನ್‌ ಆಗಿತ್ತು. ಅಜಿಂಕ್ಯ ರಹಾನೆ 35, ರವೀಂದ್ರ ಜಡೇಜ ಅಜೇಯ 31 ರನ್ ಮತ್ತು ಡೇರಿಯಲ್‌ ಮಿಎಲ್‌ 13 ರನ್‌ಗಳಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಕೆಲಹಾಕುವಲ್ಲಿ ಯಶಸ್ವಿಯಾದರು.

ಎಸ್‌ಆರ್‌ಎಚ್‌ ಪರ ಭುವನೇಶ್ವರ್ ಕುಮಾರ್, ಕಮಿನ್ಸ್ ಉನಾದ್ಯಟ್ ಶಾಹಬಾಜ್‌ ಮತ್ತು ಟಿ. ನಟರಾಜನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿ ಎಸ್‌ಆರ್‌ಎಚ್‌ಗೆ ಭರ್ಜರಿ ಆರಂಭ ದೊರೆಯಿತು. ಆರಂಭಿಕ ಬ್ಯಾಟರ್‌ ಅಭಿಷೇಕ್‌ ಶರ್ಮಾ 37, (12 ಎಸೆತ, 3ಬೌಂಡರಿ 4 ಸಿಕ್ಸರ್‌) ಉತ್ತಮವಾಗಿ ಬ್ಯಾಟ್‌ ಬೀಸಿ ಔಟಾದರು. ಇವರಿಗೆ ಜೊತೆಯಾಗಿ ಟ್ರಾವಿಸ್‌ ಹೆಡ್‌ 31, ಷಹಬಾಜ್‌ ಅಹ್ಮದ್‌ 18 ರನ್‌ ಗಳಿಸಿದರು. ಆರಂಭದಿಂದಲೂ ತಾಳ್ಮೆ ಆಟವಾಡಿದ ಮಾರ್ಕ್ರಂ 36 ಎಸೆತಗಳಲ್ಲಿ 4ಬೌಂಡರಿ, 1 ಸಿಕ್ಸರ್‌ ಸಹಿತ 50 ರನ್‌ ಗಳಿಸಿ ತಂಡ ಗೆಲ್ಲಲ್ಲು ಪ್ರಮುಖ ಪಾತ್ರ ವಹಿಸಿದರು.

ಕೊನೆಯಲ್ಲಿ ಒಂದಾದ ಹೆನ್ರಿಚ್‌ ಕ್ಲಾಸೆನ್‌ 10 ಮತ್ತು ನಿತೀಶ್‌ ರೆಡ್ಡಿ 14 ರನ್‌ ಬಾರಿಸಿದರು ತಂಡಕ್ಕೆ ಗೆಲುವು ತಂದುಕೊಟ್ಟರು. ಲೋಕಲ್‌ ಬಾಯ್‌ ನಿತೀಶ್‌ ರೆಡ್ಡಿ ಚಾಹರ್‌ ಎಸೆದ 18ನೇ ಓವರ್‌ನ ಮೊದಲ ಎಸೆತವನ್ನೇ ಸಿಕ್ಸರ್‌ ಬಾರಿಸಿ ಪಂದ್ಯವನ್ನು ಮುಗಿಸಿದರು.

ಸಿಎಸ್‌ಕೆ ಪರ ಮೋಯಿನ್‌ ಅಲಿ 2, ದೀಪಕ್‌ ಚಾಹರ್‌ ಮತ್ತು ತೀಕ್ಷಣ ತಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

6 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

7 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

7 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

8 hours ago