ಕ್ರೀಡೆ

IPL 2024: ಹೈದರಾಬಾದ್‌ ಬ್ಯಾಟಿಂಗ್‌ ಮುಂದೆ ಮಂಡಿಯೂರಿದ ಲಖನೌ

ಹೈದರಾಬಾದ್‌: ಟ್ರಾವಿಸ್‌ ಹೆಡ್‌ ಮತ್ತು ಅಭಿಷೇಕ್‌ ಶರ್ಮಾ ಅವರ ಅನ್‌ಬೀಟನ್‌ ಇನ್ನಿಂಗ್ಸ್‌ ಸಹಾಯದಿಂದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಲಖನೌ ಸೂಪರ್‌ ಜೈಂಟ್ಸ್‌ ತಂಡವನ್ನು 10 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಸೀಸನ್‌ನ 57ನೇ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಲಖನೌ ಸೂಪರ್‌ ಜೈಂಟ್ಸ್‌ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 165 ರನ್‌ ಕಲೆಹಾಕಿ 166 ರನ್‌ ಟಾರ್ಗೆಟ್‌ ನೀಡಿತು. ಈ ಮೊತ್ತ ಬೆನ್ನತ್ತಿದ ಸನ್‌ರೈಸರ್ಸ್‌ ಹೈದರಾಬಾದ್‌ ಕೇವಲ 9.4 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ನಷ್ಟವಿಲ್ಲದೇ 167 ರನ್‌ ಬಾರಿಸಿ ಗೆದ್ದು ಬೀಗಿತು.

ಎಲ್‌ಎಸ್‌ಜಿ ಇನ್ನಿಂಗ್ಸ್‌: ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಎಲ್‌ಎಸ್‌ ಆರಂಭದಲ್ಲಿಯೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಡಿಕಾಕ್‌ 2(5) ವಿಕೆಟ್‌ ಬೇಗನೇ ಕಳೆದುಕೊಂಡರು. ಬಳಿಕ ಬಂದ ಸ್ಟೋಯ್ನೀಸ್‌ 3(5) ರನ್‌ಗಳಿಸಿದರು. ನಾಯಕ ರಾಹುಲ್‌ 29(33) ಮಂದಗತಿಯ ಆಟವಾಡಿ ನಿರ್ಗಮಿಸಿದರು. ಕೃನಾಲ್‌ ಪಾಂಡ್ಯ 24(21) ರನ್‌ ಗಳಿಸಿ ಔಟಾದರು.

ಬಳಿಕ ಒಂದಾದ ನಿಕೋಲಸ್‌ ಪೂರನ್‌ ಹಾಗೂ ಅಯುಷ್‌ ಬದೋನಿ ತಂಡಕ್ಕೆ ಚೇತರಿಕೆ ಆಟವಾಡಿದರು. ನಿಕೋಲಸ್‌ ಪೂರನ್‌ 26 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್‌ ಸಹಿತ 48 ರನ್‌ ಗಳಿಸಿದರೇ, ಆಯುಷ್‌ ಬದೋನಿ 30 ಎಸೆತ ಎದುರಿಸಿ 9 ಬೌಂಡರಿ ಸಹಿತ 55 ರನ್‌ ಗಳಿಸಿ ತಂಡದ ಮೊತ್ತ 160 ಗಡಿ ದಾಟಲು ಸಹಕರಿಸಿದರು.

ಹೈದರಾಬಾದ್‌ ಪರ ಭುವನೇಶ್ವರ್‌ 2, ಪ್ಯಾಟ್‌ ಕಮಿನ್ಸ್‌ 1 ವಿಕೆಟ್‌ ಪಡೆದು ಮಿಂಚಿದರು.

ಎಸ್‌ಆರ್‌ಎಚ್‌: ಲಖನೌ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಎಸ್‌ಆರ್‌ಎಚ್‌ಗೆ ಟ್ರಾವಿಸ್‌ ಹೆಡ್‌ ಹಾಗೂ ಅಭಿಷೇಕ್‌ ಶರ್ಮಾ ಭರ್ಜರಿ ಇನ್ನಿಂಗ್ಸ್‌ ಕಟ್ಟಿದರು. ಈ ಇಬ್ಬರು ಎಡಗೈ ದಾಂಡಿಗರು ಲಖನೌ ಬೌಲರ್‌ಗಳನ್ನು ಮನ ಬಂದಂತೆ ದಂಡಿಸಿದರು. ಹೈದರಾಬಾದ್‌ ಕ್ರೀಡಾಂಗಣದ ಸುತ್ತಾ ಸಿಕ್ಸರ್‌, ಫೋರ್‌ಗಳ ಸುರಿಮಳೆ ಸುರಿಸಿದರು. ಹೈದರಾಬಾದ್‌ ಯಾವುದೇ ವಿಕೆಟ್‌ ಕಳೆದುಕೊಳ್ಳದೇ ಗುರಿ ಮುಟ್ಟಿತು.

ಇಬ್ಬರು ಔಟಾಗದೇ ಉಳಿದು ಪಂದ್ಯವನ್ನು ಗೆಲ್ಲಿಸಿದರು. ಕ್ರಮವಾಗಿ ಟ್ರಾವಿಸ್‌ ಹೆಡ್‌ 30 ಎಸೆತ ಎದುರಿಸಿ 8 ಬೌಂಡರಿ ಮತ್ತು 8 ಸಿಕ್ಸರ್‌ ಸಹಿತ 89 ರನ್‌ ಚಚ್ಚಿದರೇ, ಅಭಿಷೇಕ್‌ ಶರ್ಮಾ 28 ಎಸೆತದಲ್ಲಿ 8 ಬೌಂಡರಿ 6 ಸಿಕ್ಸರ್‌ ಸೇರಿ 75 ರನ್‌ ಗಳಿಸಿ ಪಂದ್ಯವನ್ನು ಗೆಲ್ಲಿಸಿದರು.

ಎಸ್‌ಆರ್‌ಎಚ್‌ ತಂಡವನ್ನು ಕಟ್ಟಿ ಹಾಕುವಲ್ಲಿ ಲಖನೌ ಬೌಲರ್‌ಗಳು ಪರದಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

1 hour ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

1 hour ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

1 hour ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

2 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago