ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ಆಟಗಾರ ಲಹಿರು ತಿರಿಮನ್ನೆ

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.

ಲಹಿರು ತಿರಿಮನ್ನೆ ವೃತ್ತಿಜೀವನ:

2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಶತಕ ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.

2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.

ನಾಯಕರಾಗಿಯೂ ಮಿಂಚಿದ್ದ ಲಹಿರು:

2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

7 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago