ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, ನಾನು ಅತ್ಯುತ್ತಮವಾದದ್ದನ್ನು ನೀಡಲು ಪ್ರಯತ್ನಿಸಿದ್ದೇನೆ. ಆದರೆ ದಿಢೀರ್ ನಿವೃತ್ತಿ ನೀಡಲು ಪ್ರಭಾವ ಬೀರಿದ ಕಾರಣಗಳನ್ನು ಇಲ್ಲಿ ಹೇಳಲಾರೆ ಎಂದು ತಿಳಿಸಿದ್ದಾರೆ.
2010 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದ ಮೂಲಕ ತಮ್ಮ ಅಂತರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಲಹಿರು ತಿರಿಮನ್ನೆ ಆ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಶ್ರೀಲಂಕಾ ಪರ 44 ಟೆಸ್ಟ್‌ಗಳಲ್ಲಿ 3 ಶತಕ ಮತ್ತು 10 ಅರ್ಧ ಶತಕ ಸೇರಿದಂತೆ 2088 ರನ್, 27 ಏಕದಿನ ಪಂದ್ಯಗಳಲ್ಲಿ 4 ಶತಕ ಮತ್ತು 21 ಅರ್ಧ ಶತಕಗಳು ಮತ್ತು 26 T20 ಪಂದ್ಯಗಳಲ್ಲಿ 291 ರನ್ ಸೇರಿದಂತೆ ಒಟ್ಟು 3194 ರನ್ ಕಲೆಹಾಕಿದ್ದಾರೆ.
2011ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ್ದ ಲಹಿರು 2013ರಲ್ಲಿ ಟೆಸ್ಟ್‌ನಲ್ಲಿ ಚೊಚ್ಚಲ ಶತಕ ಬಾರಿಸಿದ್ದರು. ಚೊಚ್ಚಲ ಟೆಸ್ಟ್ ಶತಕದ ನಂತರ 7 ವರ್ಷ 10 ತಿಂಗಳ ಕಾಲ ಯಾವುದೇ ಶತಕ ಗಳಿಸಲು ಸಾಧ್ಯವಾಗಲಿಲ್ಲ. 2021 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ್ದ ಅವರು ಎರಡನೇ ಟೆಸ್ಟ್ ಶತಕಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 2014ರಲ್ಲಿ ಟಿ20 ವಿಶ್ವಕಪ್ ಮತ್ತು 2014ರ ಏಷ್ಯಾಕಪ್ ಗೆದ್ದ ಶ್ರೀಲಂಕಾ ತಂಡದಲ್ ಭಾಗವಾಗಿದ್ದರು.
2014ರ ಏಷ್ಯನ್ ಗೇಮ್ಸ್ ನಲ್ಲಿ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದ ಲಹಿರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. 2019 ರಲ್ಲಿ ಪಾಕಿಸ್ತಾನ್ ಪ್ರವಾಸ ಕೈಗೊಂಡ ಶ್ರೀಲಂಕಾ ತಂಡದ ನಾಯಕರಾಗಿದ್ದರು. 2022 ರಲ್ಲಿ ಕೊನೆಯ ಬಾರಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ಲಹಿರು ತಿರಿಮನ್ನೆಗೆ ಆ ಬಳಿಕ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ತಮ್ಮ 33ನೇ ವಯಸ್ಸಿಗೆ ನಿವೃತ್ತಿ ಘೋಷಿಸುವ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…