ಕ್ರೀಡೆ

Asiacup Womens 2024: ಟೀಂ ಇಂಡಿಯಾ ಸೋಲಿಸಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟ ಶ್ರೀಲಂಕಾ

ಡಂಬುಲ್ಲಾ: ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ನೆರವಿನಿಂದ ಬಲಿಷ್ಠ ಭಾರತ ತಂಡವನ್ನು ಕಟ್ಟಿಹಾಕುವ ಮೂಲಕ ತವರಿನಂಗಳದಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದಾರೆ.

ಇಲ್ಲಿನ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಶ್ರೀಲಂಕಾ ಮೊದಲ ಬಾರಿಗೆ ಏಷ್ಯಾಕಪ್‌ ಗೆದ್ದು ಬೀಗಿತು.

ಏಷ್ಯಾಕಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ ವನಿತೆಯರ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿ 166 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ತವರಿನಂಗಳದಲ್ಲಿ ಈ ಮೊತ್ತ ಬೆನ್ನತ್ತಿದ್ದ ಶ್ರೀಲಂಕಾ 18.4 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್‌ ಕಳೆದುಕೊಂಡು 167ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಫೈನಲ್ಸ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಪರವಾಗಿ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂದನಾ ಇನ್ನಿಂಗ್ಸ್‌ ಆರಂಭಿಸಿದರು. ಶಫಾಲಿ ವರ್ಮಾ 16(19) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ಉಮಾ ಚೆಟ್ರಿ 9(7) ರನ್‌ ಗಳಿಸಿ ಔಟಾದರು. ಬಳಿಕ ಬಂದ ತಂಡ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ 11(11) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸುಭದ್ರ ಇನ್ನಿಂಗ್ಸ್‌ ಕಟ್ಟಿದ ಸ್ಮೃತಿ ಮಂದನಾ 47 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್‌ ಗಳಿಸಿ ಆಸರೆಯಾದರು. ಉಳಿದಂತೆ ರೋಡ್ರಿಗಸ್‌ 29(16) ರನ್‌, ರಿಚಾ ಘೋಷ್‌ 30(14) ರನ್‌ ಗಳಿಸಿದರು. ಪೂಜಾ ಹಾಗೂ ರಾಧಾ ಯಾದವ್‌ ಔಟಾಗದೇ ತಲಾ 5(6)ರನ್‌ ಹಾಗೂ 1(1)ರನ್‌ ಗಳಿಸಿದರು.

ಶ್ರೀಲಂಕಾ ಪರವಾಗಿ ಕವಿಶಾ 2, ಪ್ರಬೋಧನಿ, ಸಚಿನಿ ಹಾಗೂ ಚಾಮಿರಾ ಅಟಾಪಟ್ಟು ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಶ್ರೀಲಂಕಾ ಇನ್ನಿಂಗ್ಸ್‌: ಭಾರತ ತಂಡ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ವಿ.ಗುಣರತ್ನೆ 1(3) ರನ್‌ ಗಳಿಸಿ ಬಂದ ವೇಗದಲೇ ಹಿಂತಿರುಗಿದರು. ನಾಯಕಿ ಚಾಮರಿ ಅಟಾಪಟ್ಟು 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 61 ರನ್‌ ಗಳಿಸಿ ನಿರ್ಗಮಿಸಿದರು.

ನಂತರ ಜೊತೆಯಾದ ಸಮರವಿಕ್ರಮ ಹಾಗೂ ಕವಿಶಾ ತಂಡಕ್ಕೆ ಗೆಲುವು ತಂದುಕೊಟ್ಟರು. ಹರ್ಷಿತಾ ಸಮರವಿಕ್ರಮ ಔಟಾಗದೇ 51 ಎಸೆತ, 6ಬೌಂಡರಿ 2 ಸಿಕ್ಸರ್‌ ಸೇರಿ 69 ರನ್‌ ಗಳಿಸಿದರು. ಇವರಿಗೆ ಜೊತೆಯಾಗಿ ಕವಿಶಾ ಔಟಾಗದೆ 30(16) ರನ್‌ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ ಒಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಹರ್ಷಿತಾ ಸಮರವಿಕ್ರಮ
ಸರಣಿ ಶ್ರೇಷ್ಠ: ಚಾಮರಿ ಅಟಾಪಟ್ಟು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

5 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

5 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

6 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

6 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

6 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

6 hours ago