ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ.
ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ. 2 ಎಫ್‌ಐಆರ್ ಅನ್ನ ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಎರಡು ರೀತಿಯಲ್ಲಿ ತನಿಖೆಗೆ ಸರ್ಕಾರ ನಿರ್ಧರಿಸಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆಗೆ ನಿರ್ಧರಿಸಲಾಗಿದೆ. ಯಾರನ್ನು ಬಂಧನ ಮಾಡಬೇಕು ಎಂದು ಸಹ ಚರ್ಚೆ ಆಗಿದೆ ಎಂದರು.
ಗುಪ್ತಚರ ವಿಭಾಗದ ವೈಪಲ್ಯ ಬಗ್ಗೆ ಚರ್ಚೆ ಆಗಿದೆ. ವರದಿ ಬಂದ ಮೇಲೆ ಕ್ರಮದ ಬಗ್ಗೆ ಕ್ರಮ ಎಂದು ಸಿಎಂ ತಿಳಿಸಿದರು.
ನ್ಯಾ.ಮೈಕೆಲ್ ಕುನ್ಹಾ ನೇತೃತ್ವದ ಆಯೋಗ ರಚನೆ
ಘಟನೆಯ ಬಗ್ಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ನ್ಯಾ. ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.