ಕ್ರೀಡೆ

ಕಾಲ್ತುಳಿತ ಪ್ರಕರಣ | ಸಿಐಡಿ ತನಿಖೆಗೆ ಆದೇಶ

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ನ್ಯಾಯಾಂಗ ಮತ್ತು ಸಿಐಡಿ ತನಿಖೆಗೆ ವಹಿಸಲಾಗಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ, ಕೆಲವು ಮಾಹಿತಿ ಸಿಕ್ಕಿದ ಮೇಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ. 2 ಎಫ್‌ಐಆರ್ ಅನ್ನ ಸಿಐಡಿಗೆ ವಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಎರಡು ರೀತಿಯಲ್ಲಿ ತನಿಖೆಗೆ ಸರ್ಕಾರ ನಿರ್ಧರಿಸಿದೆ. ನ್ಯಾ.ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗದ ತನಿಖೆ ಹಾಗೂ ಸಿಐಡಿ ನೇತೃತ್ವದಲ್ಲಿ ತನಿಖೆಗೆ ನಿರ್ಧರಿಸಲಾಗಿದೆ. ಯಾರನ್ನು ಬಂಧನ ಮಾಡಬೇಕು ಎಂದು ಸಹ ಚರ್ಚೆ ಆಗಿದೆ ಎಂದರು.

ಗುಪ್ತಚರ ವಿಭಾಗದ ವೈಪಲ್ಯ ಬಗ್ಗೆ ಚರ್ಚೆ ಆಗಿದೆ. ವರದಿ ಬಂದ ಮೇಲೆ ಕ್ರಮದ ಬಗ್ಗೆ ಕ್ರಮ ಎಂದು ಸಿಎಂ ತಿಳಿಸಿದರು.

ನ್ಯಾ.ಮೈಕೆಲ್‌ ಕುನ್ಹಾ ನೇತೃತ್ವದ ಆಯೋಗ ರಚನೆ 

ಘಟನೆಯ ಬಗ್ಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ನ್ಯಾ. ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದರು.

RCB celebration

ಸಚಿವ ಸಂಪುಟ ಸಭೆಯಲ್ಲಿ ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

57 seconds ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

14 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

21 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago