ವಿಶಾಖಪಟ್ಟಣ : ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ.
ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. ಆಸೀಸ್ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾಕ್ಕೆ 26 ಓವರ್ ಕೂಡ ಆಡಲು ಸಾಧ್ಯವಾಗಲಿಲ್ಲ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಭಾರತವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ರೋಹಿತ್ ಪಡೆಗೆ ಒಂದೇ ಒಂದು ಉತ್ತಮ ಜೊತೆಯಾಟ ನಡೆಸಲು ಸಾಧ್ಯವಾಗಲಿಲ್ಲ. ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊರತುಪಡಿಸಿ, ಯಾವುದೇ ಬ್ಯಾಟ್ಸ್ಮನ್ಗೂ 30 ರ ಗಡಿ ದಾಟಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ಹೋರಾಟ ನಡೆಸಿದರಾದರೂ, ಅವರಿಗೆ ಯಾರಿಂದಲೂ ಸಾಥ್ ಸಿಗಲಿಲ್ಲ.
ಕೇವಲ 117 ರನ್‌ಗಳಿಗೆ ಆಲೌಟ್ ಆಗುವುದರೊಂದಿಗೆ ತವರಿನಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಅತಿ ಕಡಿಮೆ ಸ್ಕೋರ್ ಇದಾಗಿದೆ. ಅದೇ ಸಮಯದಲ್ಲಿ, ಇದು ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಮೂರನೇ ಅತಿ ಕಡಿಮೆ ಸ್ಕೋರ್ ಕೂಡ ಆಗಿದೆ. ಮುಂಬೈನಲ್ಲೂ ಇದೇ ರೀತಿಯ ಪ್ರದರ್ಶನ ನೀಡಿದ್ದ ಭಾರತ ಸೋಲಿನ ಸುಳಿಗೆ ಸಿಲುಕ್ಕಿತ್ತು. ಆದರೆ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ನಡುವಿನ ಶತಕದ ಜೊತೆಯಾಟ ತಂಡವನ್ನು ಗೆಲುವಿನ ದಡ ಸೇರಿಸಿತ್ತು. ಆದರೆ ವಿಶಾಖಪಟ್ಟಣದಲ್ಲಿ ಅಂತಹ ಯಾವುದೇ ಪಾಲುದಾರಿಕೆ ಕಂಡುಬರಲಿಲ್ಲ.
ಸೂರ್ಯ ಬ್ಯಾಕ್ ಟು ಬ್ಯಾಕ್ ಡಕ್
ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಎದುರು ಕಷ್ಟ ಪಡುತ್ತಿರುವ ಸೂರ್ಯಕುಮಾರ್ ಯಾದವ್, ಒಡಿಐ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಸ್ಟಾರ್ಕ್ ಎದುರು ಎದುರಿಸಿದ ಮೊದಲ ಎಸೆತಗಳಲ್ಲೇ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದಾರೆ. ಟಿ20-ಐ ಕ್ರಿಕೆಟ್‌ನ ನಂ.1 ಬ್ಯಾಟ್ಸ್‌ಮನ್‌ಗೆ ಒಡಿಐ ಸರಣಿಯಲ್ಲಿ ಈವರೆಗೆ ಖಾತೆ ತೆರೆಯಲು ಕೂಡ ಸಾಧ್ಯವಾಗಿಲ್ಲ.
ಅಕ್ಷರ್ ಪಟೇಲ್ ಗೆ ಸಿಗದ ಬೆಂಬಲ:
ರಾಹುಲ್ ವಿಕೆಟ್ ಬಳಿಕ ಬಂದ ಹಾರ್ದಿಕ್ ಪಾಂಡ್ಯ ಕೂಡ ಹೆಚ್ಚು ಹೊತ್ತು ನಿಲ್ಲಲ್ಲಿಲ್ಲ. ಸ್ಟೀವ್ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್ನಿಂದಾಗಿ ಪಾಂಡ್ಯ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದರು. ಇಲ್ಲಿಂದ ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಭಾರತ ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು, ಆದರೆ ನಾಥನ್ ಎಲ್ಲಿಸ್ ಇದಕ್ಕೆ ಅವಕಾಶ ನೀಡಲಿಲ್ಲ. ಮೊದಲು ವಿರಾಟ್ ಕೊಹ್ಲಿ (31 ರನ್) ಯನ್ನು ಔಟ್ ಮಾಡಿದ ಎಲ್ಲಿಸ್, ನಂತರ ರವೀಂದ್ರ ಜಡೇಜಾ (16 ರನ್) ಅವರನ್ನು ಔಟ್ ಮಾಡಿದರು. ಅಕ್ಷರ್ ಪಟೇಲ್ ಒಂದು ತುದಿಯಲ್ಲಿ ನಿಂತು 29 ರನ್ ಗಳಿಸಿ, ಇನ್ನಿಂಗ್ಸ್ ನಿಭಾಯಿಸಲು ಪ್ರಯತ್ನಿಸಿದರು. ಆದರೆ ಅವರಿಗೆ ಯಾವುದೇ ಆಟಗಾರನಿಂದ ಬೆಂಬಲ ಸಿಗಲಿಲ್ಲ. ನಾಲ್ಕು ರನ್ ಗಳಿಸಿ ಕುಲ್ದೀಪ್ ಔಟಾದರೆ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಮೂಲಕ ಟೀಂ ಇಂಡಿಯಾ ಕೇವಲ 26 ಓವರ್‌ಗಳಿಗೆ ಇನ್ನಿಂಗ್ಸ್ ಮುಗಿಸಿತು. ಇತ್ತ ಆತಿಥೇಯರನ್ನು ಆಲೌಟ್ ಮಾಡಲು ಆಸ್ಟ್ರೇಲಿಯಾಕ್ಕೆ ಕೇವಲ ಎರಡು ಗಂಟೆ 20 ನಿಮಿಷಗಳು ಬೇಕಾಯಿತು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…