ಅಮೇರಿಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಇದೇ ಜೂನ್ 1ರಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಟೀಂ ಇಂಡಿಯಾ ಕೂಡಾ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದು, ತಂಡದೊಳಗೆ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಸ್ಥಾನ ನಿರಾಕರಣೆಯಾಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಇದಕ್ಕೆ ಇಂಗ್ಲೆಂಡ್ ಮಾಜಿ ಆಟಗಾರ ಸ್ಟುವರ್ಟ್ ಬ್ರಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಪೋರ್ಟ್ ಆಪ್ ಸ್ಫೋರ್ಟ್‌ಕೀಡಾ (sportskeeda) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿರಾಟ್ ಕೊಹ್ಲಿಯನ್ನು ಮುಂಬರು ವಿಶ್ವಕಪ್ ಟೂರ್ನಿಯಿಂದ ಕೈ ಬಿಡಲಾಗುವುದು ಎಂದು ವರದಿಯಲ್ಲಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಾಡ್ “ಇದು ನಿಜವಾಗದು” ಎಂದು ಪೋಸ್ಟ್ ಮಾಡಿದ್ದಾರೆ.
ಸ್ಫೋರ್ಟ್‌ಕೀಡಾ ಟ್ವೀಟ್‌ನಲ್ಲೇನಿದೆ?
2024 ರಲ್ಲಿ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡಬಹುದು. ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್‌ಗಳಿದ್ದು, ವಿರಾಟ್ ಕೊಹ್ಲಿಗೆ ಸರಿಹೊಂದುವುದಿಲ್ಲ ಮತ್ತು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವು ಉದ್ದೇಶದಿಂದ ಅವರನ್ನು ತಂಡದಿಂದ ಬದಿಗಿಡಬಹುದು ಎಂದು ಸ್ಫೋರ್ಟ್‌ಕೀಡಾ ವರದಿ ಮಾಡಿತ್ತು.



