ಬೆಂಗಳೂರು– ಮಂಡ್ಯ ಜಿಲ್ಲೆಯ ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಉತ್ಪಾದನಾ ವೆಚ್ಚ ಹಾಗೂ ರಾಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ಹಾಗೂ ಕಟಾವು ಮತ್ತು ಸಾಗಾಣಿಕಾ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕಬ್ಬಿಗೆ ವೈಜ್ಞಾನಿಕಬೆಲೆ ನಿಗದಿಯಾಗಿಲ್ಲ. ಇದರಿಂದ ರೈತಾಪಿ ವರ್ಗದ ಬದುಕು ಬಹಳ ದುಸ್ತರವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 500ರೂ. ಪ್ರೋತ್ಸಾಹ ಧನ ನೀಡುವಂತೆ ಹಾಗೂ ವೈಜ್ಞಾನಿಕ
ದರ ನಿಗದಿಪಡಿಸುವಂತೆ ಒತ್ತಾಯಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಬ್ಬು ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿದ್ದು, ರೈತರು ತಮ್ಮ ಜೀವನೋಪಾಯಕ್ಕಾಗಿ ಕಬ್ಬು ಬೆಳೆಯನ್ನು ಅವಲಂಬಿಸಿದ್ದು, ಜಿಲ್ಲೆಯ ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ, ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆ, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ವರ್ಷ ಪ್ರತಿ ಕಾರ್ಖಾನೆಯು ಸರಾಸರಿ ಸುಮಾರು 5 ರಿಂದ 9 ಲಕ್ಷ ಟನ್ ಕಬ್ಬನ್ನು ಅರೆಯುತ್ತಿದ್ದು, ಮಂಡ್ಯ ಮೈಸೂರು ಸಕ್ಕರೆ ಕಾರ್ಖಾನೆಯು ಇತ್ತೀಚೆಗೆ ಪ್ರಾರಂಭವಾಗಿದೆ.
ಅಂದರೆ ಕಳೆದ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಸದರಿ ಕಾರ್ಖಾನೆಯ ಪುನಶ್ಚೇತನಕ್ಕಾಗಿ 50 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು, ಅದರಲ್ಲಿ 30 ಕೋಟಿ ಅನುದಾನ ಮಾತ್ರ ಬಿಡುಗಡೆ ಮಾಡಿದ್ದು, ಉಳಿಕೆ 20 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.
ಸರ್ಕಾರ ಪ್ರಸ್ತುತ ನೀಡುತ್ತಿರುವ ಪ್ರತಿ ಟನ್ ಕಬ್ಬಿನ ಬೆಲೆಯಿಂದ ಕಬ್ಬು ಬೆಳೆಗಾರರಿಗೆ ಯಾವುದೇ ಲಾಭಂಶವಿಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ. ಉತ್ಪಾದನಾ ವೆಚ್ಚ ಹಾಗೂ ರಾಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ಹಾಗೂ ಕಟಾವು ಮತ್ತು ಸಾಗಾಣಿಕಾ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವುದರಿಂದ ರೈತರ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೇ ಇರುವುದು ರೈತಾಪಿ ವರ್ಗದ ಬದುಕು ದುಸ್ತರವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 500ರೂ.ಪ್ರೋತ್ಸಾಹ
ಧನ ನೀಡುವಂತೆ ಹಾಗೂ ವೈಜ್ಞಾನಿಕ
ವ ದರ ನಿಗದಿಪಡಿಸುವಂತೆ ಜಿಲ್ಲೆಯ
ರೈತರ ಪರವಾಗಿ ಒತ್ತಾಯಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ತುರ್ತಾಗಿ ಜನಪ್ರತಿನಿಗಳು ಮತ್ತು ರೈತ ಮುಖಂಡರ ಸಭೆ ಕರೆಯಬೇಕೆಂದು ಮನವಿ ಮಾಡಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…