ಕ್ರೀಡೆ

ಪ್ರತಿ ಟನ್‍ ಕಬ್ಬಿಗೆ 500 ರೂ. ಪ್ರೋತ್ಸಾಹ ಧನ ನೀಡಿ : ಸಿಎಂ ಗೆ ದಿನೇಶ್ ಗೂಳಿಗೌಡ ಮನವಿ

ಬೆಂಗಳೂರು– ಮಂಡ್ಯ ಜಿಲ್ಲೆಯ  ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಉತ್ಪಾದನಾ ವೆಚ್ಚ ಹಾಗೂ ರಾಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ಹಾಗೂ ಕಟಾವು ಮತ್ತು ಸಾಗಾಣಿಕಾ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕಬ್ಬಿಗೆ ವೈಜ್ಞಾನಿಕಬೆಲೆ ನಿಗದಿಯಾಗಿಲ್ಲ. ಇದರಿಂದ ರೈತಾಪಿ ವರ್ಗದ ಬದುಕು ಬಹಳ ದುಸ್ತರವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 500ರೂ. ಪ್ರೋತ್ಸಾಹ ಧನ ನೀಡುವಂತೆ ಹಾಗೂ ವೈಜ್ಞಾನಿಕ ‌
ದರ ನಿಗದಿಪಡಿಸುವಂತೆ ಒತ್ತಾಯಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕಬ್ಬು ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿದ್ದು, ರೈತರು ತಮ್ಮ ಜೀವನೋಪಾಯಕ್ಕಾಗಿ ಕಬ್ಬು ಬೆಳೆಯನ್ನು ಅವಲಂಬಿಸಿದ್ದು, ಜಿಲ್ಲೆಯ ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ, ಎನ್‍ಎಸ್‍ಎಲ್ ಸಕ್ಕರೆ ಕಾರ್ಖಾನೆ, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ವರ್ಷ ಪ್ರತಿ ಕಾರ್ಖಾನೆಯು ಸರಾಸರಿ ಸುಮಾರು 5 ರಿಂದ 9 ಲಕ್ಷ ಟನ್ ಕಬ್ಬನ್ನು ಅರೆಯುತ್ತಿದ್ದು, ಮಂಡ್ಯ ಮೈಸೂರು ಸಕ್ಕರೆ ಕಾರ್ಖಾನೆಯು ಇತ್ತೀಚೆಗೆ ಪ್ರಾರಂಭವಾಗಿದೆ.
ಅಂದರೆ ಕಳೆದ ಆಯವ್ಯಯದಲ್ಲಿ ರಾಜ್ಯ ಸರ್ಕಾರ ಸದರಿ ಕಾರ್ಖಾನೆಯ ಪುನಶ್ಚೇತನಕ್ಕಾಗಿ 50 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು, ಅದರಲ್ಲಿ 30 ಕೋಟಿ ಅನುದಾನ ಮಾತ್ರ ಬಿಡುಗಡೆ ಮಾಡಿದ್ದು, ಉಳಿಕೆ 20 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ.
ಸರ್ಕಾರ ಪ್ರಸ್ತುತ ನೀಡುತ್ತಿರುವ ಪ್ರತಿ ಟನ್ ಕಬ್ಬಿನ ಬೆಲೆಯಿಂದ ಕಬ್ಬು ಬೆಳೆಗಾರರಿಗೆ ಯಾವುದೇ ಲಾಭಂಶವಿಲ್ಲದೆ ನಷ್ಟ ಅನುಭವಿಸುತ್ತಿದ್ದಾರೆ. ಉತ್ಪಾದನಾ ವೆಚ್ಚ ಹಾಗೂ ರಾಸಾಯನಿಕ ಗೊಬ್ಬರಗಳ ಬೆಲೆ ಏರಿಕೆ ಹಾಗೂ ಕಟಾವು ಮತ್ತು ಸಾಗಾಣಿಕಾ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವುದರಿಂದ ರೈತರ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೇ ಇರುವುದು ರೈತಾಪಿ ವರ್ಗದ ಬದುಕು ದುಸ್ತರವಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 500ರೂ.ಪ್ರೋತ್ಸಾಹ
ಧನ ನೀಡುವಂತೆ ಹಾಗೂ ವೈಜ್ಞಾನಿಕ
ವ ದರ ನಿಗದಿಪಡಿಸುವಂತೆ ಜಿಲ್ಲೆಯ
ರೈತರ ಪರವಾಗಿ ಒತ್ತಾಯಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ತುರ್ತಾಗಿ ಜನಪ್ರತಿನಿಗಳು ಮತ್ತು ರೈತ ಮುಖಂಡರ ಸಭೆ ಕರೆಯಬೇಕೆಂದು ಮನವಿ ಮಾಡಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

7 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

9 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago