ಕ್ರೀಡೆ

ವೃತ್ತಿ ಬದುಕಿಗೆ ಕಣ್ಣೀರಿನ ವಿದಾಯ ಹೇಳಿದ ಸುನಿಲ್ ಚೆಟ್ರಿ

ಕೊಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣ ಫುಟ್‌ಬಾಲ್‌ ದಂತಕಥೆ ಸುನಿಲ್ ಚೆಟ್ರಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಿದೆ.

ಇಂದು ( ಜೂನ್ 6 ) ನಡೆದ ಕುವೈತ್ ವಿರುದ್ಧದ ಪಂದ್ಯದ ಮೂಲಕ ಈ ಮೊದಲೇ ಘೋಷಿಸಿದಂತೆ ತಮ್ಮ ವೃತ್ತಿ ಬದುಕನ್ನು ಕೊನೆಗೊಳಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ಹಾಗೂ ಕುವೈತ್ ಎರಡೂ ತಂಡಗಳೂ ಸಹ ಯಾವುದೇ ಗೋಲ್ ಬಾರಿಸುವಲ್ಲಿ ಯಶಸ್ವಿಯಾಗದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಪಂದ್ಯ ಮುಗಿಯುತ್ತಿದ್ದಂತೆ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು, ಭಾರತ ತಂಡದ ಆಟಗಾರರಲ್ಲಿ ಬೇಸರ ಮನೆಮಾಡಿತ್ತು.‌ 19 ವರ್ಷಗಳ ಕಾಲ ಅಂತಾರಾಷ್ಟ್ರೀಯ ಫುಟ್‌ಬಾಲ್‌ ಆಡಿ, ಭಾರತದಲ್ಲಿ ಕಾಲ್ಚೆಂಡಿನ ಕ್ರೇಜ್ ಹೆಚ್ಚಿಸಿದ ಸುನಿಲ್ ಚೆಟ್ರಿ ಕಣ್ಣೀರಿಡುತ್ತಾ ಮೈದಾನವನ್ನು ಒಂದು ಸುತ್ತುಹಾಕಿ ಅಭಿಮಾನಿಗಳತ್ತ ಕೈ ಬೀಸಿ ನಿರ್ಗಮಿಸಿದರು.

andolana

Recent Posts

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

25 mins ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

52 mins ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

1 hour ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

2 hours ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

3 hours ago