ಮುಂಬೈ: ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ.
ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುರೇಶ್ ರೈನಾ ಅವರು, ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಆದ್ದರಿಂದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ರೋಹಿತ್ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ತೆರೆ ಎಳೆದ ಐದು ದಿನಗಳ ನಂತರ, ಕಳೆದ ಸೋಮವಾರ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಣೆ ಮಾಡಿದರು. 36 ವರ್ಷ ವಯಸ್ಸಿನ ಕೊಹ್ಲಿ 123 ಪಂದ್ಯಗಳ್ಲಲಿ 9230 ರನ್ ಗಳಿಸಿ, 30 ಶತಕಗಳನ್ನು ಒಳಗೊಂಡಂತೆ ಭಾರತದ ಪರ ನಾಲ್ಕನೇ ಅತೀ ಹೆಚ್ಚು ರನ್ ಗಳಿಸಿದವರಾಗಿ ತಮ್ಮ ವೃತ್ತಿ ಜೀವನವನ್ನು ಕೊನೆಗೊಳಿಸಿದ್ದಾರೆ.
ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಭಾರತ ರತ್ನ ಪ್ರಶಸ್ತಿ ಪಡೆದ ಏಕೈಕ ಕ್ರೀಡಾಪಟುವಾಗಿದ್ದು, ಈ ಪ್ರಶಸ್ತಿಯನ್ನು ಪಡೆದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.





