ಕ್ರೀಡೆ

ಸೂರ್ಯಕುಮಾರ್ ಮತ್ತೊಂದು ದಾಖಲೆ

ವೇಗದ ಶತಕ ಸಿಡಿಸಿದ ಭಾರತದ 3ನೇ ಆಟಗಾರ

ಅಜೇಯ 111 ರನ್
51ಎಸೆತ
11 ಬೌಂಡರಿ
07ಸಿಕ್ಸರ್

ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ-೨೦ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಛೋಟಕ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಕೇವಲ ೪೯ ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಾಂ ಪರ ಸೂರ್ಯಕುಮಾರ್ ಯಾದವ್ ಕಿವೀಸ್ ಬೌಲರ್‌ಗಳನ್ನು ದಂಡಿಸಿದರು. ಪಂದ್ಯದಲ್ಲಿ ಅಜೇಯರಾಗಿ ಉಳಿದ ಸೂರ್ಯಕುಮಾರ್ ೫೧ ಎಸೆತಗಳಲ್ಲಿ ೧೧೧ ರನ್ ಬಾರಿಸಿದ್ದರು.

ಅದ್ಭುತ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ (ಅಜೇಯ ೧೧೧) ಅವರ ಶತಕದಿಂದಾಗಿ ನ್ಯೂಜಿಲೆಂಡ್ ವಿರುದ್ಧ ಭಾರತ ೬ ವಿಕೆಟ್ ನಷ್ಟಕ್ಕೆ ೧೯೧ ರನ್ ಪೇರಿಸಿದೆ. ಸೂರ್ಯಕುಮಾರ್ ತಮ್ಮ ಎರಡನೇ ಟಿ-೨೦ ಅಂತಾರಾಷ್ಟ್ರೀಯ ಶತಕಕ್ಕಾಗಿ ೪೯ ಎಸೆತಗಳನ್ನು ತೆಗೆದುಕೊಂಡರು. ಇದರಲ್ಲಿ ೧೧ ಬೌಂಡರಿ ಮತ್ತು ೭ ಸಿಕ್ಸರ್‌ಗಳು ಸೇರಿವೆ.

ಇನ್ನು ಟಿ-೨೦ ಕ್ರಿಕೆಟ್ ಲ್ಲಿ ಭಾರತದ ಪರ ಎರಡು ಶತಕ ಸಿಡಿಸಿದ ಖ್ಯಾತಿಗೆ ಸೂರ್ಯಕುಮಾರ್ ಯಾದವ್ ಭಾಜನರಾದರು. ರೋಹಿತ್ ಶರ್ಮಾ ಭಾರತದ ಪರ ವೇಗದ ಶತಕ ಸಿಡಿಸಿ ಅಗ್ರ ಬ್ಯಾಟ್ಸ್‌ಮನ್ ಆಗಿದ್ದಾರೆ. ಶ್ರೀಲಂಕಾ ವಿರುದ್ಧ ೩೫ ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ನಂತರ ಸ್ಥಾನದಲ್ಲಿ ಕೆ.ಎಲ್.ರಾಹುಲ್ ಇದ್ದಾರೆ. ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ೪೬ ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಟ-೨೦ ಅಂತಾರಾಷ್ಟ್ರೀುಂ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ೧೨೨, ರೋಹಿತ್ ಶವಾ ೧೧೮, ಸೂರ್ಯಕುಮಾರ್ ಯಾದವ್ ೧೧೭ ಭಾರತ ಪರ ಅತ್ಯಧಿಕ ರನ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ.

ಟಿ-೨೦ ಅತಿಹೆಚ್ಚು ರನ್ ಗಳಿಸಿದವರು
* ೨೦೧೭ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ೧೧೮ ರನ್ (೧೦೦ ರನ್-೩೫ ಎಸೆತ)
* ಕೆ.ಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧ ೧೧೭ ರನ್ (೧೦೦ ರನ್-೪೬ ಎಸೆತ)
* ೨೦೨೨ ಸೂರ್ಯಕುಮಾರ್ ನ್ಯೂಜಿಲೆಂಡ್ ವಿರುದ್ಧ ೧೧೧ ರನ್ (೧೦೦ ರನ್-೪೯ ಎಸೆತ)

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago