ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ಗೆ ಎಂಟ್ರಿ ಕೊಡಲು ಇಂಗ್ಲೆಂಡ್ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್ ಆಗಿದ್ದು, ಬ್ಯಾಟಿಂಗ್ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.
ಆಟಗಾರರ ಸಂಭಾವ್ಯ ಪಟ್ಟಿಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…
‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…