ಕ್ರೀಡೆ

ಟಿ-20 ವಿಶ್ವಕಪ್ : ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ

ಸಿಡ್ನಿ: ಟಿ20 ವಿಶ್ವಕಪ್​ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್​ಗೆ ಎಂಟ್ರಿ ಕೊಡಲು ಇಂಗ್ಲೆಂಡ್​ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್‌ ಆಗಿದ್ದು, ಬ್ಯಾಟಿಂಗ್​ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್​ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.
ಆಟಗಾರರ ಸಂಭಾವ್ಯ ಪಟ್ಟಿಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago