ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ ಆಚರಿಸಿಕೊಂಡಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಏಷ್ಯನ್ ಚಾಂಪಿಯನ್ ಆದದ್ದನ್ನು ಕಂಡ ಆಫ್ಘನ್ನರು ಬೀದಿಗಿಳಿದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಇವರಲ್ಲಿ ಕೆಲವರು ಕುಣಿದು ಕುಪ್ಪಳಿಸಿದರೆ, ಇನ್ನೂ ಕೆಲವರು ಕಣ್ಣೀರು ಹಾಕಿದರು. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿಡಿಯೋ ಈಗ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ.
ವಾಸ್ತವವಾಗಿ ಅಂದೊಂದು ಘಟನೆ ನಡೆಯದೆ ಇದ್ದರೆ ಅಫ್ಘನ್ನರು ಈ ರೀತಿಯ ಸಂಭ್ರಮಾಚರಣೆ ಮಾಡುತ್ತಿರಲಿಲ್ಲ ಅನಿಸುತ್ತದೆ. ಅಷ್ಟಕ್ಕೂ ಅಫ್ಘನ್ನರ ಈ ಸಂಭ್ರಮಕ್ಕೆ ಶಾರ್ಜಾದಲ್ಲಿ ಬುಧವಾರ ನಡೆದ ಏಷ್ಯಾಕಪ್ 2022 ರ ಸೂಪರ್ ಫೋರ್ ಪಂದ್ಯದಲ್ಲಿ ಪಾಕ್ ಕ್ರಿಕೆಟಿಗ ತೋರಿದ ದುರ್ವತನೆ ಹಾಗೂ ಅಂತಿಮ ಓವರ್ನಲ್ಲಿನ ಸೋಲಿನಿಂದಾಗಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಆ ಬಳಿಕ ಎರಡು ದೇಶಗಳ ಅಭಿಮಾನಿಗಳು ಹಾವು ಮುಂಗುಸಿಗಳಂತೆ ಸೋಶಿಯಲ್ ಮೀಡಿಯಾದಲ್ಲಿ ಕಾಲ್ಕೆರೆದು ಜಗಳದಲ್ಲಿ ತೊಡಗಿದ್ದರು. ಈಗ ಫೈನಲ್‌ನಲ್ಲಿ ಪಾಕಿಸ್ತಾನದ ಸೋಲನ್ನು ಅಫ್ಘಾನ್ ದೇಶದ ನಾಗರಿಕರು ಹಬ್ಬದಂತೆ ಆಚ್ಚರಿಸಿಕೊಂಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…