ಟಿ20 ವಿಶ್ವಕಪ್ 2022 ರಲ್ಲಿ ನ್ಯೂಜಿಲೆಂಡ್ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ್ದ ನ್ಯೂಜಿಲೆಂಡ್ ತಂಡ ಇದೀಗ ಶ್ರೀಲಂಕಾವನ್ನು 70 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ ಗ್ಲೆನ್ ಫಿಲಿಪ್ಸ್ ಅವರ ಅಬ್ಬರದ ಶತಕ ಆದಾರದ ಮೇಲೆ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಟ್ರೆಂಟ್ ಬೌಲ್ಟ್ ಮಾರಕ ಬೌಲಿಂಗ್ ಮುಂದೆ ಮಕಾಡೆ ಮಲಗುವುದರೊಂದಿಗೆ ಕೇವಲ 102 ರನ್ಗಳಿಗೆ ಅಲೌಟ್ ಆಯಿತು.
ಸಿಡ್ನಿಯಲ್ಲಿ ನಡೆದ ಈ ಪಂದ್ಯವು ಸೂಪರ್ -12 ಸುತ್ತಿನಲ್ಲಿ ಒಂದನೇ ಗುಂಪಿಗೆ ಬಹಳ ಮಹತ್ವದ್ದಾಗಿತ್ತು. ಈ ಗುಂಪಿನ ಕೊನೆಯ ಕೆಲವು ಪಂದ್ಯಗಳು ಮಳೆಯಿಂದಾಗಿ ರದ್ದಾಗಿದ್ದವು. ಹೀಗಾಗಿ ಈ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆ ಇತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ತಂಡದ ಆರಂಭಿಕ 3 ವಿಕೆಟ್ಗಳು ಕೇವಲ 15 ರನ್ಗಳಿಗೆ ಉರುಳಿದವು. ಆದರೆ ಆ ಬಳಿಕ ತಂಡದ ಇನ್ನಿಂಗ್ಸ್ ಕಟ್ಟಿದ ಗ್ಲೆನ್ ಫಿಲಿಪ್ಸ್ ಅಬ್ಬರದ ಶತಕ ಸಿಡಿಸುವುದರೊಂದಿಗೆ ತಂಡವನ್ನು ಈ ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…