ಕ್ರೀಡೆ

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು ಸೂಪರ್ ಓವರ್‌ಳಿಗೆ ಸಾಕ್ಷಿಯಾಯಿತು. ಎರಡನೇ ಸೂಪರ್ ಓವರ್‌ನ ಕೊನೆಯ ಎಸೆತದವರೆಗೂ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಗೆಲುವು ಸಾಧಿಸಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ಕ್ವಿಂಟನ್ ಡಿ ಕಾಕ್ (59 ರನ್; 41 ಎಸೆತ) ಹಾಗೂ ರಯಾನ್ ರಿಕೆಲ್ಟನ್ (61 ರನ್; 28 ಎಸೆತ) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.

188 ರನ್‌ಗಳ ಗುರಿ ಬೆನ್ನತ್ತಿದ ಅಪ್ಘಾನಿಸ್ತಾನ ತಂಡದ ಇಬ್ರಾಹಿಂ ಜದ್ರಾನ್ ಹಾಗೂ ಗುಲ್ಬಾದಿನ್ ನೈಬ್ ಅವರ ವಿಕೆಟ್ ಪಡೆಯುವ ಮೂಲಕ ಲುಂಗಿ ಎನ್ಗಿಡಿ ಆಘಾತ ನೀಡಿದರು. ಆರಂಭಿಕ ರಹಮಾನುಲ್ಲಾ ಗುರ್ಬಾಜ್ 42 ಎಸೆತಗಳಲ್ಲಿ 84 ರನ್ ಗಳಿಸುವ ಮೂಲಕ ಆಸರೆಯಾದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಳು ರನ್ ಗಳಿಸುವಲ್ಲಿ ವಿಫಲರಾದರು. ಆದರೆ, ಡೆತ್ ಓವರ್‌ನಲ್ಲಿ ನಾಯಕ ರಶೀದ್ ಖಾನ್ (20 ರನ್; 12 ಎಸೆತ) ಹಾಗೂ ನೂರ್ ಅಹಮ್ಮದ್ (15 ರನ್: 9 ಎಸೆತ) ಸ್ಪೋಟಕ ಆಟವಾಡುವ ಮೂಲಕ ತಂಡವನ್ನು ಗೆಲುವಿನಂಚಿಕೆ ತಂದರು. 3 ಎಸೆತಗಳಲ್ಲಿ 1 ರನ್ ಅಗತ್ಯವಿದ್ದಾಗ ಫಜಲ್ಹಕ್ ಫಾರೂಕಿ ರನ್ ಔಟ್ ಆಗುವ ಮೂಲಕ ಈ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಪಂದ್ಯ ಟೈ ಆಯಿತು.

ಮೊದಲ ಸೂಪರ್ ಓವರ್‌ನಲ್ಲಿ ಅಪ್ಘಾನಿಸ್ತಾನ ತಂಡ 17 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಕೂಡ ಅಷ್ಟೇ ರನ್ ಗಳಿಸಿದರು. ಎರಡನೇ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ ಪರ ಮಿಲ್ಲರ್, ಕೇವಲ 4 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 16 ರನ್ ಗಳಿಸಿದರು. ಒಟ್ಟು 23 ರನ್ ಬಾರಿಸಿದರು.

24 ರನ್ ಗುರಿ ಬೆನ್ನಟ್ಟಿದ ಅಪ್ಘಾನಿಸ್ತಾನ, ಎರಡನೇ ಎಸೆತದಲ್ಲೇ ನಬಿ ವಿಕೆಟ್ ಕಳೆದುಕೊಂಡಿತು. ಮಹಾರಾಜ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸುವ ಮೂಲಕ ಗುರ್ಬಾಜ್ ಅವರು ಪಂದ್ಯವನ್ನು ರೋಚಕ ಹಂತಕ್ಕೆ ತಲುಪಿಸಿದರು. ಆದರೆ, ಕೊನೆಯ ಎಸೆತದಲ್ಲಿ ಗುರ್ಬಾಜ್, ಮಿಲ್ಲರ್ಗೆ ಕ್ಯಾಚ್ ನೀಡುವ ಮೂಲಕ, ಅಪ್ಘಾನ್ ತಂಡವು 4 ರನ್‌ಗಳಿಂದ ಸೋಲನುಭವಿಸಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago