ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡವು, ನಾಯಕ ರಿಚೀ ಬೆರಿಂಗ್ಟನ್ (49 ರನ್: 32 ಎಸೆತ) ಅವರ ಬ್ಯಾಟಿಂಗ್ ನೆರವಿನಿಂದ 19.4 ಓವರ್ಗಳಲ್ಲಿ 152 ರನ್ ಗಳಿಸಿತು. 153 ರನ್ ಗುರಿ ಬೆನ್ನಟಿದ ಇಂಗ್ಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿತು. ಫಿಲ್ ಸಾಲ್ಟ್ (2 ರನ್), ಜೋಸ್ ಬಟ್ಲರ್ (3 ರನ್) ವೈಫಲ್ಯ ಅನುಭವಿಸಿದರು. 13 ರನ್ಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ ಜಾಕೋಬ್ ಬೆಥೆಲ್ (32 ರನ್; 28 ಎಸೆತ) ಹಾಗೂ ಟಾಮ್ ಬಾಥಮ್ (63 ರನ್; 41 ಎಸೆತ) ಆಸರೆಯಾದರು.
ಹ್ಯಾರಿ ಬ್ರೂಕ್ ಪಡೆಯು 18.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇಂಗ್ಲೆಂಡ್ ಪರ ಆದಿಲ್ ರಶೀದ್ 3 ವಿಕೆಟ್ ಪಡೆದು ಮಿಂಚಿದರು. ಇಂಗ್ಲೆಂಡ್ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸುವ ಮೂಲಕ 4 ಪಾಯಿಂಟ್‌ಗಳೊಂದಿಗೆ ಸಿ ಗುಂಪಿನಲ್ಲಿ ಎರಡನೇ ಸ್ಥಾನಕ್ಕೇರಿತು.
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…