Mysore
24
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಟಿ20 ವಿಶ್ವಕಪ್‌: ಕೊನೆಯ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಫೀಲ್ಡಿಂಗ್‌ ಆಯ್ಕೆ

ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ. ಕಾಕತಾಳಿಯವೆಂದರೆ 1992ರ ವಿಶ್ವಕಪ್​ನಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಟಿ20 ಚಾಂಪಿಯನ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಟಾಸ್ ಗೆದ್ದ ನಂತರ, ಬಾಬರ್ ಅಜಮ್ ಮತ್ತು ಜೋಸ್ ಬಟ್ಲರ್ ತಮ್ಮ ತಮ್ಮ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿತ್ತು. ಹಾಗೆಯೇ ಇಂಗ್ಲೆಂಡ್ ಕೂಡ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಈಗ ಎರಡೂ ತಂಡಗಳಲ್ಲಿ ಯಾರು ಗೆದ್ದರೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದ್ದಾರೆ.

ಅಂತಿಮ ಕದನಕ್ಕೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ-ಫೈನಲ್ ಗೆಲುವಿನ ಸಂಯೋಜನೆಯೊಂದಿಗೆ ಅಂತಿಮ ಮೈದಾನವನ್ನು ಆಡಲು ಎರಡೂ ತಂಡಗಳು ಮೆಲ್ಬೋರ್ನ್‌ ಮೈದಾನದಲ್ಲಿ ಕಾಲಿಟ್ಟಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!