ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಅಂದರೆ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ. ಕಾಕತಾಳಿಯವೆಂದರೆ 1992ರ ವಿಶ್ವಕಪ್ನಲ್ಲೂ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಪ್ರಶಸ್ತಿ ಗೆದ್ದಿತ್ತು. ಹೀಗಾಗಿ ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಾಕಿಸ್ತಾನ ಟಿ20 ಚಾಂಪಿಯನ್ ಆಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಟಾಸ್ ಗೆದ್ದ ನಂತರ, ಬಾಬರ್ ಅಜಮ್ ಮತ್ತು ಜೋಸ್ ಬಟ್ಲರ್ ತಮ್ಮ ತಮ್ಮ ತಂಡದ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಪಾಕಿಸ್ತಾನ ಫೈನಲ್ ಟಿಕೆಟ್ ಖಚಿತಪಡಿಸಿಕೊಂಡಿತ್ತು. ಹಾಗೆಯೇ ಇಂಗ್ಲೆಂಡ್ ಕೂಡ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಈಗ ಎರಡೂ ತಂಡಗಳಲ್ಲಿ ಯಾರು ಗೆದ್ದರೂ ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಲಿದ್ದಾರೆ.
ಅಂತಿಮ ಕದನಕ್ಕೆ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ-ಫೈನಲ್ ಗೆಲುವಿನ ಸಂಯೋಜನೆಯೊಂದಿಗೆ ಅಂತಿಮ ಮೈದಾನವನ್ನು ಆಡಲು ಎರಡೂ ತಂಡಗಳು ಮೆಲ್ಬೋರ್ನ್ ಮೈದಾನದಲ್ಲಿ ಕಾಲಿಟ್ಟಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…