ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.
ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ ಎಲ್ಲರೂ ಕಾತರರಾಗಿದ್ದು ಎರಡೂ ದೇಶಗಳ ನಡುವಿನ ಪಂದ್ಯ ಕ್ಷಣಕ್ಷಣಕ್ಕೂ ಕುತೂಹಲ ಹೆಚ್ಚಿಸಲಿದೆ.
ಎರಡೂ ತಂಡಗಳು ಈಗ ಕೊಲಂಬೋದಲ್ಲಿದ್ದು ಬಂಗಾಳಕೊಲ್ಲಿಯ ಆಗ್ನೇಯ ಭಾಗದ ಸಮುದ್ರದಲ್ಲಿ ವಾಯು ಭಾರ ಕುಸಿಯುವ ಸಾಧ್ಯತೆ ಇದ್ದು ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿದೆ. ಸಂಜೆ ಮಳೆ ಸುರಿಯಬಹುದು ಎಂದು ಶ್ರೀಲಂಕಾದ ಹವಾಮಾನ ಇಲಾಖೆಯು ತಿಳಿಸಿದೆ.
ಪಂದ್ಯ ಪ್ರಾರಂಭವಾಗುವ ಎರಡು ಗಂಟೆಗಳ ಮೊದಲು ಅಂದರೆ ಸಂಜೆ 5 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಿದ್ದರೂ ಪಂದ್ಯ ನಡೆಯುವ ವೇಳೆ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಿದೆ. ಇದರ ನಡುವೆ ಐಸಿಸಿ ಕೂಡ ಗಮನ ಹರಿಸಿದ್ದು, ತಡವಾದರೂ ಪಂದ್ಯ ನಡೆಸುವ ಇರಾದೆಯಲ್ಲಿದೆ.
ಭಾರತ ಮತ್ತು ಪಾಕ್ ತಂಡಗಳು ಲೀಗ್‌ನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿವೆ. ಆದರೂ ರನ್ ರೇಟ್ ಆಧಾರದ ಮೇಲೆ ಭಾರತ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಭಾರತ ತಂಡ ನೆಟ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದು ಪಾಕ್‌ಗೆ ಮತ್ತೆ ಸೋಲಿನ ರುಚಿ ತೋರಿಸಲು ಹಾತೊರೆಯುತ್ತಿದೆ. ಈಗಾಗಲೇ ಭಾತರದ ವಿರುದ್ಧ ಆಡುವುದಿಲ್ಲ ಎಂದು ಹೈಡ್ರಾಮ ಮಾಡಿದ್ದ ಪಾಕ್‌ಗೆ ಐಸಿಸಿ ಭಾರೀ ದಂಡ ಮತ್ತು ನಿರ್ಬಂಧದ ಎಚ್ಚರಿಕೆ ನೀಡಿದ ನಂತರ ಯೂಟರ್ನ್ ಹೊಡೆದಿದೆ. ಪಾಕ್ ಆಟಗಾರರು ಈ ಎಲ್ಲಾ ಬೆಳವಣಿಗೆಗಳಿಂದ ಒತ್ತಡದಲ್ಲಿದ್ದು, ಜಾಣ್ಮೆಯ ಆಟಕ್ಕೆ ಮುಂದಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಿಮ್ಯಾಚ್ ಕಾನ್ಛರೆನ್ಸ್‌ನಲ್ಲಿ ಮಾತನಾಡಿದ ಭಾರತ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಅವರನ್ನು ಎದುರಾಳಿ ಆಟಗಾರರೊಂದಿಗೆ ಟೀಂ ಇಂಡಿಯಾ ಹ್ಯಾಂಡ್ ಶೇಕ್ ಮಾಡಲಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಟಾಸ್‌ನಲ್ಲಿ ಹ್ಯಾಂಡ್‌ಶೇಕ್ ಬಗ್ಗೆ ನೋಡೋಣ. ಅದಕ್ಕೆ ಇನ್ನಷ್ಟು ಗಂಟೆ ಕಾಯಿರಿ ಎಂದಷ್ಟೇ ಹೇಳಿದರು. ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ ಶರ್ಮಾ ಹಾಗೂ ಸ್ಪಿನ್ನರ್ ಕುಲದೀಪ್ ಯಾದವ್ ಆಡಲಿದ್ದಾರೆ ಎಂಬುದನ್ನು ನಾಯಕ ಸೂರ್ಯಕುಮಾರ್ ಯಾದವ್ ಖಚಿತಪಡಿಸಿದರು.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…