ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.
ಅಡಿಲೇಡ್ ನಲ್ಲಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್ ಆರಂಭಿಕರಾದ ಜೋಸ್ ಬಟ್ಲರ್ (80) ಮತ್ತು ಅಲೆಕ್ಸ್ ಹೇಲ್ಸ್ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.
ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್ ಕೇವಲ ಐದು ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ28 ಬಾಲ್ ಗಳಲ್ಲಿ27 ರನ್ ಗಳಿಸಿ ಔಟಾದರು.
ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.
ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…