ಕ್ರೀಡೆ

ಟಿ20 ವಿಶ್ವಕಪ್ ಆಂಗ್ಲರ ಎದುರು ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ.

ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 168 ರನ್ ಗಳ ಗೌರವಾರ್ಹ ಮೊತ್ತ ಪೇರಿಸಿತು. ಆದರೆ ಇಂಗ್ಲೆಂಡ್‌ ಆರಂಭಿಕರಾದ ಜೋಸ್‌ ಬಟ್ಲರ್‌ (80) ಮತ್ತು ಅಲೆಕ್ಸ್‌ ಹೇಲ್ಸ್‌ ( 86) ಅವರ ಮುರಿಯದ ಜತೆಯಾಟದಲ್ಲಿ ಭಾರತದ ಕನಸು ನುಚ್ಚುನೂರಾಯಿತು.

ಭಾರತ ಆರಂಭದಲ್ಲಿಯೇ ಆಘಾತ ಎದುರಿಸಿತು. ಕೆ.ಎಲ್. ರಾಹುಲ್‌ ಕೇವಲ ಐದು ರನ್‌ ಗಳಿಸಿ ಔಟಾದರೆ, ನಾಯಕ ರೋಹಿತ್‌ ಶರ್ಮಾ28 ಬಾಲ್‌ ಗಳಲ್ಲಿ27 ರನ್‌ ಗಳಿಸಿ ಔಟಾದರು.

ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 50 ರನ್ ಬಾರಿಸಿದರು. ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ 63 ರನ್ ಕಲೆಹಾಕಿದರು. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿತು. ಆದರೆ ಇಂಗ್ಲೆಂಡ್ ನ ಆರಂಭಿಕರ ಅಬ್ಬರದ ಎದುರು ಈ ಸವಾಲು ಸಾಕಾಗಲಿಲ್ಲ.

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago