ಕ್ರೀಡೆ

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಟಿ-20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ. ಈ ಕುರಿತ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದು ಎಂದು ಹೇಳಿದ್ದಾರೆ.

ಎಲ್ಲಾ ದೃಷ್ಟಿಯಿಂದ ಪರಾಮರ್ಶೆ ಮಾಡಿದ ನಂತರವೇ ಭಾರತದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ಶೆಹಬಾಜ್ ಷರೀಫ್ ಹೇಳಿದ್ದಾರೆ.

ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಎಲ್ಲ ನಿಟ್ಟಿನಿಂದ ಚರ್ಚಿಸಿದ ಬಳಿಕವೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಇದು ಸೂಕ್ತ ನಿರ್ಧಾರ ಎಂದೂ ತಿಳಿಸಿದ್ದಾರೆ.

ಬಾಂಗ್ಲಾದೇಶ ತಂಡ ಐಸಿಸಿ ಟಿ-20 ವಿಶ್ವಕಪ್‌ನಿಂದ ಹೊರ ನಡೆಯುತ್ತಿದ್ದಂತೆ ಪಾಕಿಸ್ತಾನ ತನ್ನ ಹೊಸ ನಾಟಕ ಆರಂಭಿಸಿತು. ಭದ್ರತಾ ಕಾರಣಗಳನ್ನು ನೀಡಿ ಬಾಂಗ್ಲಾದೇಶ ಟಿ-20 ವಿಶ್ವಕಪ್‌ನಲ್ಲಿ ಭಾರತಕ್ಕೆ ಪ್ರಯಾಣ ಬೆಳೆಸುವುದಿಲ್ಲ ಎಂದು ತಿಳಿಸಿತ್ತು. ಅಲ್ಲದೆ ತನ್ನ ಗುಂಪು ಹಾಗೂ ಸ್ಥಳವನ್ನು ಬದಲಿಸುವಂತೆ ಐಸಿಸಿಗೆ ಬೇಡಿಕೆ ಇಟ್ಟಿತ್ತು. ಆದರೆ ಐಸಿಸಿ ಈ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಅಲ್ಲದೆ ಬಾಂಗ್ಲಾದೇಶವನ್ನು ಟಿ-20 ವಿಶ್ವಕಪ್‌ನಿಂದ ಹೊರಗಿಡಲಾಯಿತು.

ಬಾಂಗ್ಲಾದೇಶಕ್ಕೆ ಬೆಂಬಲವಾಗಿ ಪಾಕಿಸ್ತಾನ ಟೂರ್ನಿಯನ್ನು ಬಾಯ್ಕಟ್ ಮಾಡುವುದಾಗಿ ಈ ಮೊದಲು ಸುದ್ದಿಗಳು ಹೊರ ಬಂದಿದ್ದವು. ಆ ಬಳಿಕ ಪಾಕಿಸ್ತಾನ ಸರ್ಕಾರ ಯಾವುದೇ ಕಾರಣವನ್ನು ನೀಡದೇ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಅಂಗಳಕ್ಕೆ ಇಳಿಯುವುದಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿತ್ತು.

ನಂತರ ಸ್ಪಷ್ಟನೆ ನೀಡಿದ್ದ ಪಾಕಿಸ್ತಾನ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆ. ಆದರೆ, ಭಾರತದ ವಿರುದ್ಧ ಲೀಗ್ ಹಂತದ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

26 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

41 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago