Mysore
26
broken clouds
Light
Dark

T20 World Cup : ಪಾಕ್ ಎದುರು ಭಾರತಕ್ಕೆ ಜಯ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು.

ಇಲ್ಲಿನ ಮೆಲ್ಬರ್ನ್ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 159ರನ್‌ ಕಲೆಹಾಕಿತ್ತು. ಶಾನ್‌ ಮಸೂದ್‌ (ಔಟಾಗದೆ 52 ರನ್) ಮತ್ತು ಇಫ್ತಿಕರ್‌ ಅಹಮದ್ (51 ರನ್) ಅರ್ಧಶತಕ ಸಿಡಿಸಿ ಮಿಂಚಿದ್ದರು. ಈ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಇನಿಂಗ್ಸ್‌ ಆರಂಭಿಸಿದ ನಾಯಕ ರೋಹಿತ್‌ ಶರ್ಮಾ (4) ಹಾಗೂ ಉಪನಾಯಕ ಕೆ.ಎಲ್‌.ರಾಹುಲ್‌ (4) ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡರು.

ಬಳಿಕ ಬಂದ ಸೂರ್ಯಕುಮಾರ್‌ ಯಾದವ್‌ (15) ಮತ್ತು ಅಕ್ಷರ್ ಪಟೇಲ್‌ (2) ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ ಕೇವಲ 31 ರನ್‌ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೊಹ್ಲಿ ಮತ್ತು ಪಾಂಡ್ಯ, ವಿಕೆಟ್‌ ಬೀಳದಂತೆ ಎಚ್ಚರಿಕೆಯ ಆಟವಾಡಿದರು. ನಿಧಾನವಾಗಿ ರನ್‌ ಗತಿಯನ್ನೂ ಹೆಚ್ಚಿಸಿ 5ನೇ ವಿಕೆಟ್ ಪಾಲುದಾರಿಕೆಯಲ್ಲಿ 113 ರನ್‌ಗಳ ಕಲೆಹಾಕಿದರು. ಕೊನೇ ಓವರ್‌ನ ಮೊದಲ ಎಸೆತದಲ್ಲಿ ಪಾಂಡ್ಯ ಔಟಾದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ