ನವದೆಹಲಿ : ಭಾನುವಾರದಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಕ್ಕೆ ಭಾರತದ 15 ಸದಸ್ಯರ ಕ್ರಿಕೆಟ್ ತಂಡದಲ್ಲಿ ಗಾಯಗೊಂಡಿರುವ ಜಸ್ ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಮುಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಶಮಿ ಅವರು ಈ ಮೊದಲು ಟಿ ಟ್ವೆಂಟಿ ವಿಶ್ವಕಪ್ ನ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಬೆನ್ನು ನೋವಿನಿಂದಾಗಿ ಬುಮ್ರಾ ಅವರು ವಿಶ್ವಕಪ್ ನಿಂದ ಹೊರಗುಳಿದ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡಕ್ಕೆ ತೆಗೆದುಕೊಳ್ಳಲಾಗಿದೆ.

ಭಾರತವು ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ವಿಶ್ವಕಪ್ ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಐಐಸಿಸಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಯಾರೆಲ್ಲ ಇದ್ದಾರೆ
ರೋಹಿತ್ ಶರ್ಮಾ (ತಂಡದ ನಾಯಕ) ,ಕೆ ಎಲ್ ರಾಹುಲ್ (ತಂಡದ ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ, ದೀಪಕ್ ಹೂಡ, ರಿಸಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯಜುವೇಂದ್ರ ಚಹಾಲ್, ಅಕ್ಷರ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಹರ್ಷದೀಪ್ ಸಿಂಗ್, ಮುಹಮ್ಮದ್ ಶಮಿ





