ಮೆಲ್ಬೋರ್ನ್(ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ 20 ಓವರ್ಗಳಲ್ಲಿ 5 ವಿಕೆಟ್ಗೆ 186 ರನ್ ಗಳಿಸಿ ಸವಾಲಿನ ಗುರಿ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ, ನಾಯಕ ರೋಹಿತ್ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಈ ವಿಶ್ವಕಪ್ನ ಅತ್ಯಧಿಕ ರನ್ನರ್ ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ರನ್ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್ ಗಳಿಸಿ ಔಟಾಗಿದ್ದ ರಾಹುಲ್ ಈ ಪಂದ್ಯದಲ್ಲೂ ಸಿಕ್ಸರ್ ಸಿಡಿಸಿ 51 ರನ್ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್ ನೀಡಿ ಐವತ್ತರ ಆಟ ಅನುಭವಿಸಿದರು.
ಸೂರ್ಯಕುಮಾರ್ ಯಾದವ್ ವಿಶ್ವಕಪ್ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್ನಲ್ಲಿ ದಾಖಲೆ ಬರೆದರು.
ಕಳಪೆ ಬ್ಯಾಟಿಂಗ್ನಿಂದಾಗಿ ವಿಶ್ವಕಪ್ನಲ್ಲಿ ಕಾದಿದ್ದ ವಿಕೇಟ್ ಕೀಪರ್ ರಿಷಬ್ ಪಂತ್ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್ ಕಾರ್ತಿಕ್ ಬದಲಾಗಿ ಕಣಕ್ಕಿಳಿದ ಪಂತ್ 3 ರನ್ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸನ್ 2 ವಿಕೆಟ್ ಪಡೆದು ಮಿಂಚಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…