ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಸೋತು, ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿದ್ದ ಪಾಕಿಸ್ತಾನ, ಇಂದು ಸಿಡ್ನಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಬೇಟೆಯಾಡಿ ಫೈನಲ್ ಪ್ರವೇಶಿಸಿದೆ.
ಸಿಡ್ನಿ ಮೈದಾನದಲ್ಲಿ ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿ ಭರ್ಜರಿಯಾಗಿ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ನಾಳೆ ನಡೆಯುವ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆದ್ದರೆ ಫೈನಲ್ ನಲ್ಲಿ ಮತ್ತೆ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿವೆ. ಮೊದಲೆರಡು ಪಂದ್ಯಗಳಲ್ಲಿ ಭಾರತ ಮತ್ತು ಜಿಂಬಾಬ್ವೆ ವಿರುದ್ಧ ಸೋಲು ಕಂಡಿದ್ದ ಪಾಕಿಸ್ತಾನ ಕ್ರಿಕೆಟ್ ತಂಡ ಪುನರಾಗಮನ ಮಾಡಿದ ರೀತಿಯನ್ನು ಯಾರೂ ಕೂಡ ಊಹಿಸಿರಲಿಲ್ಲ. ವಾರದ ಹಿಂದೆ ವಿಶ್ವಕಪ್ ನಿಂದ ಹೊರಗುಳಿಯಲಿದೆ ಎಂದು ಅನಿಸಿಕೊಂಡಿದ್ದ ತಂಡವು ಇದೀಗ ವಿಶ್ವಕಪ್ನ ಫೈನಲ್ ಗೆ ತಲುಪಿ, ಎಲ್ಲರನ್ನೂ ಅಚ್ಚರಿಗೊಳಿಸಿದೆ.
ನವೆಂಬರ್ 6 ರಂದು ತಮ್ಮ ಕೊನೆಯ ಸೂಪರ್-12 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ತಲುಪಿದ ಪಾಕಿಸ್ತಾನ ತಂಡವು ನವೆಂಬರ್ 9 ಬುಧವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ತನ್ನ ನೈಜ ಸಾಮರ್ಥ್ಯವನ್ನು ಪ್ರದರ್ಶಿಸಿದೆ. 1992 ರಿಂದಲೂ ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್ ಸೆಮಿಫೈನಲ್ ನಲ್ಲಿ ಪ್ರಾಬಲ್ಯ ಮೆರೆದಿರುವ ಪಾಕಿಸ್ತಾನ ತಂಡ ಈ ವಿಶ್ವಕಪ್ ನಲ್ಲೂ ಇತಿಹಾಸವನ್ನು ಬದಲಾಯಿಸಲು ಬಿಡಲಿಲ್ಲ.
ಶ್ರೇಷ್ಠ ಬೌಲಿಂಗ್, ಸ್ಟ್ರಾಂಗ್ ಫೀಲ್ಡಿಂಗ್
ಟೂರ್ನಿಯಲ್ಲಿ ಸತತವಾಗಿ ಉತ್ತಮ ಬೌಲಿಂಗ್ ಮಾಡುತ್ತಿರುವ ಪಾಕಿಸ್ತಾನ ತಂಡ ಈ ಪಂದ್ಯದಲ್ಲೂ ಅದೇ ಆಟ ಪ್ರದರ್ಶಿಸಿತು. ವಿಶೇಷವಾಗಿ ಪಾಕ್ ನ ಸ್ಟಾರ್ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ತಂಡದ ಬೌಲಿಂಗ್ ಅನ್ನು ಉತ್ತುಂಗಕ್ಕೆ ಕೊಂಡೊಯ್ದರು. ಅದರಲ್ಲೂ ಮೊದಲ ಓವರ್ ನಲ್ಲಿಯೇ ಫಿನ್ ಅಲೆನ್ ಅವರನ್ನು ಎಲ್ ಬಿ ಡಬ್ಲ್ಯೂ ಮಾಡುವ ಮಾಡುವ ಮೂಲಕ ತಂಡಕ್ಕೆ ಉತ್ತಮ ಆರಂಭವನ್ನು ನೀಡಿದರು.ನ್ಯೂಜಿಲ್ಯಾಂಡ್ ನೀಡಿದ್ದ 153 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ಇನ್ನು 5 ಎಸೆತ ಬಾಕಿ ಇರುವಂತೆ 153 ರನ್ ಪೇರಿಸಿ ಗೆಲುವಿನ ನಗೆ ಬೀರಿದೆ.
ಪಾಕಿಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಾಂ ಅತ್ಯುತ್ತಮ ಆರಂಭ ಒದಗಿಸಿಕೊಟ್ಟರು. ಮೊಹಮ್ಮದ್ ರಿಜ್ವಾನ್ 57 ರನ್ ಬಾರಿಸಿದ್ದರೆ ಬಾಬರ್ ಅಜಾಂ 53 ರನ್ ಗಳಿಸಿ ಔಟಾದರು. ನಂತರ ಬಂದ ಮೊಹಮ್ಮದ್ ಹ್ಯಾರಿಸ್ 30 ಹಾಗೂ ಶಾನ್ ಮಸೂದ್ ಅಜೇಯ 3 ರನ್ ಬಾರಿಸಿದ್ದಾರೆ.
ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್ ಪೇರಿಸಿತ್ತು. ನ್ಯೂಜಿಲ್ಯಾಂಡ್ ಪರ ಫಿನ್ ಅಲೆನ್ 4, ಡೆವೊನ್ ಕಾನ್ವೇ 21, ಕೇನ್ ವಿಲಿಯಮ್ಸನ್ 46, ಗ್ಲೆನ್ ಫಿಲಿಪ್ಸ್ 6 ಡೇರಿಲ್ ಮಿಚೆಲ್ ಅಜೇಯ 53 ಜೇಮ್ಸ್ ನೀಶಮ್ ಅಜೇಯ 16 ರನ್ ಪೇರಿಸಿದರು. ಪಾಕ್ ಪರ ಬೌಲಿಂಗ್ ನಲ್ಲಿ ಶಾಹೀನ್ ಶಾ ಆಫ್ರಿದಿ 2 ಮತ್ತು ಮೊಹಮ್ಮದ್ ನವಾಜ್ 1 ವಿಕೆಟ್ ಪಡೆದು ಮಿಂಚಿದರು.
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…