ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿದೆ.
ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ ಪಡೆದಿದ್ದ ವಿರಾಟ್ ಕೊಹ್ಲಿ ಮತ್ತೆ ಟಿ೨೦ ಫಾರ್ಮೇಟ್‌ನಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಮುಂಬರುವ ಟಿ20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಮಣೆ ಹಾಕಿದ್ದಾರೆ.
ಜನವರಿ 11 ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮೊಲದ ಟಿ20 ಪಂದ್ಯ ನಡೆಯಲಿದೆ. ಜನವರಿ 14 ರಂದು ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯ ಮತ್ತು ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.
ಅಫ್ಘಾನ್ ವಿರುದ್ಧ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವೈ. ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ವಾಷಿಂಗ್‌ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್