Mysore
24
broken clouds

Social Media

ಬುಧವಾರ, 09 ಜುಲೈ 2025
Light
Dark

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿಗೆ ಸ್ಥಾನ ನೀಡಲಾಗಿದೆ.

ಇದೇ ಜುಲೈ 12ರಿಂದ ಆಗಸ್ಟ್ 13ರವರೆಗೆ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ. ಜುಲೈ 12ರಿಂದ ಟೆಸ್ಟ್ ಪಂದ್ಯಗಳು ಆರಂಭವಾಗಲಿದ್ದು, ಜುಲೈ 27ರಿಂದ ಏಕದಿನ ಸರಣಿ ಮತ್ತು ಆಗಸ್ಟ್ 3ರಿಂದ ಟಿ20 ಸರಣಿ ಆರಂಭವಾಗಲಿದೆ.

ಉಳಿದಂತೆ ತಂಡಗಳು ಇಂತಿವೆ.
ಟೆಸ್ಟ್ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆಎಸ್ ಭರತ್ (ವಾಕ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ , ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (wk), ಇಶಾನ್ ಕಿಶನ್ (wk), ಹಾರ್ದಿಕ್ ಪಾಂಡ್ಯ (VC), ಶಾರ್ದೂಲ್ ಠಾಕೂರ್, ಆರ್ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!