ಡಂಬುಲ್ಲಾ: ಭಾರತ ತಂಡ ಕರಾರುವಕ್ಕಾದ ಬೌಲಿಂಗ್ ದಾಳಿಗೆ ನಲುಗಿದ ಪಾಕಿಸ್ತಾನ ಮಹಿಳಾ ತಂಡ ಏಷ್ಯಾಕಪ್ 2024ರ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಮುಂದೆ 7 ವಿಕೆಟ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಮಹಿಳಾ ಭಾರತ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಇಲ್ಲಿನ ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ನ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿತು. 19.2 ಓವರ್‌ಗಳಿಗೆ ಆಲ್‌ಔಟ್ ಆಗಿದ ಪಾಕಿಸ್ತಾನ ಕೇವಲ 108 ರನ್ ಗಳಿಸಿ ಭಾರತ ತಂಡಕ್ಕೆ 109ರನ್‌ಗಳ ಸಾಧಾರಣ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಭಾರತ ತಂಡ ಕೇವಲ 14.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 109 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಪಾಕಿಸ್ತಾನ್ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಬಂದ ಗುಲ್ ಫಿರೋಜಾ 5(5), ಮುಬೀನಾ ಅಲಿ 11(11) ಅವರನ್ನು ಔಟ್ ಮಾಡುವ ಮೂಲಕ ಪಾಕಿಸ್ತಾನಕ್ಕೆ ಪೂಜಾ ಆರಂಭಿಕ ಬ್ರೇಕ್ ಹಾಕಿದರು.
ಬಳಿಕ ಬಂದ ಅಮೀನ್ 25(35) ರನ್ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಗರಿಷ್ಠ ರನ್. ಟುಬಾ ಹಸನ್ 22(19) ಹಾಗೂ ಫಾತಿಮಾ ಸನ ಔಟಾಗದೇ 22(16) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ತಂಡದ ಮೊತ್ತ ನೂರರ ಗಡಿ ದಾಟಲು ಸಹಕರಿಸಿದರು.
ಉಳಿದಂತೆ ನಾಯಕಿ ನಿಧಾ ಧರ್ 8(11), ಆಲಿಯಾ ರಿಯಾಜ್ 6(11), ಜಾವೇದ್ ಡಕ್‌ಔಟ್, ಆರೂಬ್ ಶಾ 2(3), ಸಾದಿಯಾ ಇಕ್ಬಾಲ್ ಹಾಗೂ ನಶ್ರಾ ಸಂಧು ಡಕ್‌ಔಟ್ ಆಗಿ ಹೊರನಡೆದರು.
ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ ಪ್ರಮುಖ ಮೂರು ವಿಕೆಟ್ ಕಬಳಿಸಿ ಮಿಂಚಿದರು. ರೇಣುಕಾ ಸಿಂಗ್, ಪೂಜಾ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ತಲಾ 2 ವಿಕೆಟ್ ಕಬಳಿಸಿ ಗಮನ ಸೆಳೆದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಶಫಾಲಿ ವರ್ಮಾ 40(29) ರನ್ ಹಾಗೂ ಸ್ಮೃತಿ ಮಂದನ್ನಾ 45(31) ರನ್ ಗಳಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಬಳಿಕ ಬಂದ ಹೇಮಲತಾ 14(11) ರನ್ ಗಳಿಸಿ ಔಟಾದರು.
ಕೊನೆಯಲ್ಲಿ ಒಂದಾದ ನಾಯಕ ಹರ್ಮನ್‌ಪ್ರೀತ್ ಕೌರ್ 5(11) ಮತ್ತು ರೋಡ್ರಿಗಸ್ 3(3) ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪಾಕಿಸ್ತಾನ ಪರ ಆರೂಬ್ ಶಾ ಎರಡು ಹಾಗೂ ನಶ್ರಾ ಸಂಧು ಒಂದು ವಿಕೆಟ್ ಕಬಳಿಸಿದರು.
ಪಂದ್ಯಶ್ರೇಷ್ಠ: ದೀಪ್ತಿ ಶರ್ಮಾ
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…