ಕ್ರೀಡೆ

Zim vs Ind ಟಿ20 ಸರಣಿ: ಕೊನೆ ಪಂದ್ಯ ಗೆದ್ದು 4-1 ಅಂತರದಿಂದ ಸರಣಿ ವಶಪಡಿಸಿಕೊಂಡ ಭಾರತ

ಹರಾರೆ: ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ 42 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ಟೀಂ ಇಂಡಿಯಾ ತಂಡ ಐದು ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 167 ರನ್‌ ಕಲೆಹಾಕಿ 168 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಜಿಂಬಾಬ್ವೆ 18.3 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 125 ರನ್‌ ಕಲೆಹಾಕಿ 42 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಕೊನೆಯ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ಭಾರತ ತಂಡದ ಪರವಾಗಿ ನಾಯಕ ಶುಭ್‌ಮನ್‌ ಗಿಲ್‌ ಹಾಗೂ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರು. ಜೈಸ್ವಾಲ್‌ 12(5) ಬೇಗನೇ ಔಟಾದರೇ, ನಾಯಕ ಗಿಲ್‌ 13(14)ರನ್‌ ಗಳಿಸಿ ಅವರನ್ನೇ ಹಿಂಬಾಲಿಸಿದರು.

ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 58 ರನ್‌ ಗಳಿಸದರು. ಇದು ತಂಡದ ಪರವಾಗಿ ಗಳಿಸಿದ ಗರಿಷ್ಠ ರನ್‌ ಆಗಿತ್ತು. ಉಳಿದಂತೆ ಅಭಿಷೇಕ್‌ ಶರ್ಮಾ 14(11) ರನ್‌, ರಿಯಾನ್‌ ಪರಾಗ್‌ 22(24)ರನ್‌, ದುಬೆ 26(12)ರನ್‌, ರಿಂಕು ಹಾಗೂ ವಾಷಿಂಗ್‌ಟನ್‌ ಸುಂದರ್‌ ಔಟಾಗದೇ ತಲಾ 11(9)ರನ್‌, 1(1)ರನ್‌ ಗಳಿಸಿದರು.

ಜಿಂಬಾಬ್ವೆ ಪರ ಮುಜರಬಾನಿ ಎರಡು ವಿಕೆಟ್‌ ನಾಗರವ, ನಾಯಕ ರಾಝಾ ಹಾಗೂ ಬ್ರಂಡನ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಜಿಂಬಾಬ್ವೆ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಂಬಾಬ್ವೆಗೆ ಮುಖೇಶ್‌ ಕುಮಾರ್‌ ಆಘಾತ ನೀಡಿದರು. ವೆಸ್ಲಿ ಅವರು ಮುಖೇಶ್‌ ಕುಮಾರ್‌ ಅವರ ಮೊದಲ ಓವರ್‌ನಲ್ಲಿಯೇ ಬಲಿಯಾದರು. ಬಳಿಕ ಬಂದ ಬೆನೆಟ್‌ 10(8) ರನ್‌ ಗಳಿಸಿ ಮುಖೇಶ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಚೇಸಿಂಗ್‌ ವೇಳೆ ಮೇಯರ್‌ ಗಳಿಸಿದ 34(32)ರನ್‌ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಫರಾಜ್‌ ಅಕ್ರಮ್‌ 27(13) ರನ್‌ ಗಳಿಸಿದರು ಇದರ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಟ್ಟಿ ಗೆಲ್ಲುವಲ್ಲಿ ವಿಫಲರಾದರು.

ಮುರುಮಾನಿ 27(24), ಸಿಕಂದರ್‌ ರಾಜಾ 8(12), ಕ್ಯಾಂಪ್‌ಬೆಲ್‌ 4(7), ಕ್ಲೈವ್‌ 1(4), ಬ್ರಂಡನ್‌ 4(7), ನಾಗವರ ಡಕ್‌ಔಟ್‌, ಮುಜರಬಾನಿ ಔಟಾಗದೇ 1(2)ರನ್‌ ಗಳಿಸಿದರು.

ಟೀಂ ಇಂಡಿಯಾ ಪರವಾಗಿ ಮುಖೇಶ್‌ ಕುಮಾರ್‌ 4 ವಿಕೆಟ್‌, ಶಿವಂ ದುಬೆ 2 ವಿಕೆಟ್‌, ಅಭಿಷೇಕ್‌ ಶರ್ಮಾ, ದೇಶ್‌ಪಾಂಡೆ ಹಾಗೂ ವಾಷಿಂಗ್‌ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

ಸರಣಿ ಶ್ರೇಷ್ಠ: ವಾಷಿಂಗ್‌ಟನ್‌ ಸುಂದರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

5 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

9 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

9 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

10 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

10 hours ago