ಬಾರ್ಬಡೋಸ್: ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.
ವೆಸ್ಟ್ ಇಂಡೀಸ್‌ನ ಕೆರೆಬಿಯ್ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್‌ಡೌನ್ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…