ನವದೆಹಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ಚಾಂಪಿಯನ್ಸ್ ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6.05 ರ ಸುಮಾರಿಗೆ ಟಿ20 ವಿಶ್ವಕಪ್ ಚಾಂಪಿಯನ್‌ಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 13 ವರ್ಷಗಳ ಕಪ್ ದಾಹವನ್ನು ನೀಗಿಸಿರುವ ಟೀಮ್ ಇಂಡಿಯಾ ತಂಡವನ್ನು ದೆಹಲಿಯಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಬಾರ್ಬಡೋಸ್ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ವಿಶೇಷ ವಿಮಾನದ ಮೂಲಕ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ಆಟಗಾರರೆಲ್ಲಾ ತಾಯ್ನಾಡಿಗೆ ಆಗಮಿಸಿದ್ದಾರೆ.