ಸದ್ಯ ಏಕದಿನ ವಿಶ್ವಕಪ್ ಟೂರ್ನಿ ಜರುಗುತ್ತಿದ್ದು, ತವರಿನಲ್ಲೇ ನಡೆಯುತ್ತಿರುವ ಈ ಮಹಾ ಕದನದಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿ ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್ ಹಂತದಲ್ಲಿ ಇಲ್ಲಿಯವರೆಗೆ ಒಟ್ಟು ಎಂಟು ಪಂದ್ಯಗಳನ್ನು ಆಡಿರುವ ಭಾರತ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದಿದ್ದು ಇಂದು ( ನವೆಂಬರ್ 12 ) ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್‌ಲೆಂಡ್ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗಲಿದ್ದು ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ಶುರುವಾಗಲಿದೆ. ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿ ವರ್ಗ ದೀಪಾವಳಿ ಹಬ್ಬವನ್ನು ಆಚರಿಸಿದೆ.
ಹೌದು, ಬಿಸಿಸಿಐ ಟೀಮ್ ಇಂಡಿಯಾ ಆಟಗಾರರು ದೀಪಾವಳಿ ಆಚರಿಸಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಕೋಚ್ ರಾಹುಲ್ ದ್ರಾವಿಡ್, ತಂಡಡ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಜಪ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಸೇರಿದಂತೆ ಇನ್ನೂ ಹಲವಾರು ಆಟಗಾರರು ಕಾಣಿಸಿಕೊಂಡಿದ್ದಾರೆ.
ದೇವರ ಪೂಜೆ ಹಾಗೂ ದೀಪಾವಳಿ ಪ್ರಯುಕ್ತ ದೀಪ ಹಚ್ಚುವ ಮೂಲಕ ಹಬ್ಬದ ಆಚರಣೆ ಮಾಡಿರುವ ಟೀಮ್ ಇಂಡಿಯಾ ಆಟಗಾರರು ತಮ್ಮ ಕುಟುಂಬ ಸದಸ್ಯರ ಜತೆ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ. ನೆದರ್‌ಲೆಂಡ್ ಹಾಗೂ ಭಾರತದ ನಡುವಿನ ಇಂದಿನ ಪಂದ್ಯದ ಮೂಲಕ ಈ ಬಾರಿಯ ವಿಶ್ವಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಳ್ಳಲಿದ್ದು, ಸೆಮಿಫೈನಲ್ ಸುತ್ತಿನ ಪಂದ್ಯಗಳು ನವೆಂಬರ್ 15 & 16ರಂದು ಜರುಗಲಿವೆ.
ಅಂಕಪಟ್ಟಿಯಲ್ಲಿ ಒಂದನೇ ಸ್ಥಾನವನ್ನು ಪಡೆದುಕೊಂಡಿರುವ ಭಾರತ ತಂಡ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದ್ದು, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸಲಿವೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…