ನವದೆಹಲಿ : ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಟೀಂ ಇಂಡಿಯಾದಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದು, ಅದನ್ನು ಜೈ ಶಾ ಕೂಡ ಅಂಗೀಕಾರ ಮಾಡಿದ್ದಾರೆ.
ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದ ಬಳಿಕ ಇಡೀ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಲಾಗಿತ್ತು. ಬಳಿಕ ಕಳೆದ ತಿಂಗಳಷ್ಟೇ ಹಿರಿಯ ಆಯ್ಕೆ ಸಮಿತಿಯ ಮುಖ್ಯ ಆಯ್ಕೆಗಾರರಾಗಿ ಚೇತನ್ ಅವರನ್ನು ಮರು ನೇಮಕ ಮಾಡಲಾಗಿತ್ತು.





