ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.
ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಬಲ ತೊಡೆಯ ಭಾಗಕ್ಕೆ ಗಾಯವಾಗಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ, ರಾಹುಲ್ ಅವರಿಗೆ ಆದಷ್ಟು ಬೇಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಲಾಗಿದೆ. ಅವರಿಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಮಾಡಲು ನಿರ್ಧರಿಸಲಾಗಿದೆ.
ಹೀಗಾಗಿ ಮುಂದಿನ ಐಪಿಎಲ್ ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ನಿಂದ ಅವರು ಹೊರಗುಳಿದಿದ್ದಾರೆ.
ಫೈನಲ್ ಪಂದ್ಯಕ್ಕೆ ನೇಮಕವಾಗಿದ್ದ ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕತ್ ಅವರು ಗಾಯಗೊಂಡಿದ್ದು, ಅವರ ಫೈನಲ್ ಪಂದ್ಯ ಪಾಲ್ಗೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಡಬ್ಲೂಟಿಸಿ ಫೈನಲ್ ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿ.ಕೀ).
ಸ್ಟ್ಯಾಂಡ್ ಬೈ ಆಟಗಾರರು: ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…
ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…
ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್…
ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…
ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…