ಕ್ರೀಡೆ

ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಕೆಎಲ್ ರಾಹುಲ್ ಬದಲಿಗೆ ಹೊಸ ಆಟಗಾರನ ನೇಮಿಸಿದ ಬಿಸಿಸಿಐ

ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.

ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ಅವರ ಬಲ ತೊಡೆಯ ಭಾಗಕ್ಕೆ ಗಾಯವಾಗಿತ್ತು. ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ, ರಾಹುಲ್ ಅವರಿಗೆ ಆದಷ್ಟು ಬೇಗ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಲಾಗಿದೆ. ಅವರಿಗೆ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಮಾಡಲು ನಿರ್ಧರಿಸಲಾಗಿದೆ.

ಹೀಗಾಗಿ ಮುಂದಿನ ಐಪಿಎಲ್ ಪಂದ್ಯಗಳು ಮತ್ತು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ನಿಂದ ಅವರು ಹೊರಗುಳಿದಿದ್ದಾರೆ.

ಫೈನಲ್ ಪಂದ್ಯಕ್ಕೆ ನೇಮಕವಾಗಿದ್ದ ಉಮೇಶ್ ಯಾದವ್ ಮತ್ತು ಜಯದೇವ್ ಉನಾದ್ಕತ್ ಅವರು ಗಾಯಗೊಂಡಿದ್ದು, ಅವರ ಫೈನಲ್ ಪಂದ್ಯ ಪಾಲ್ಗೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಡಬ್ಲೂಟಿಸಿ ಫೈನಲ್‌ ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿ.ಕೀ).

ಸ್ಟ್ಯಾಂಡ್‌ ಬೈ ಆಟಗಾರರು: ರುತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

14 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

14 hours ago