ಡರ್ಬನ್: ಸೌತ್ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್ ಬೌಲರ್ ಪ್ರಭಾತ್ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಡರ್ಬನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ 191 ರನ್ ಕಲೆಹಾಕಿ ಆಲೌಟ್ ಆದರೆ, ಶ್ರೀಲಂಕಾ ಕೇವಲ 42 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ 366 ರನ್‌ಗಳಿಸಿ ದಕ್ಷಿಣ ಆಫ್ರಿಕಾ ಡಿಕ್ಲೇರ್ ಘೋಷಿಸುವ ಮೂಲಕ ಶ್ರೀಲಂಕಾಗೆ ಗೆಲ್ಲಲು 516 ರನ್ ಟಾರ್ಗೆಟ್ ನೀಡಿದೆ.
ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಸೇರಿ ಒಟ್ಟು 4 ವಿಕೆಟ್ ಪಡೆಯುವ ಮೂಲಕ ಅತಿ ಕಡಿಮೆ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಚಾರ್ಲಿ ಟರ್ನರ್ 30 ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿ ಇದ್ದರೆ, ಕ್ಲಾರಿ ಗ್ರಿಮೆಟ್ಟ್ 31 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿ 2ನೇ ಸ್ಥಾನದಲ್ಲಿದ್ದಾರೆ. ಇದೀಗ ಪ್ರಭಾತ್ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆಯುವ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನ ಆಲಂಕರಿಸಿದ್ದಾರೆ.
ಶ್ರೀಲಂಕಾ ಪರ 17 ಟೆಸ್ಟ್ ಪಂದ್ಯಗಳನ್ನು ಆಡಿರುವ ಪ್ರಭಾತ್ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ ಒಟ್ಟು 101 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ನಲ್ಲಿ 100 ವಿಕೆಟ್ ಪಡೆದ ಏಷ್ಯಾದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.