ಕ್ರೀಡೆ

ಏಷ್ಯಾ ಗೇಮ್ಸ್‌ ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಡುವುದೇ ಗುರಿ: ಋತುರಾಜ್

ನವದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯಲಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾವನ್ನು ಸಿಎಸ್‌ಕೆಯ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಮಹಾ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಕೊಡುವುದೇ ನನ್ನ ಮಹತ್ತರ ಕನಸಾಗಿದೆ ಎಂದು ತಮ್ಮ ಹೆಬ್ಬಯಕೆ ವ್ಯಕ್ತಪಡಿಸಿದ್ದಾರೆ.

ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಂ.ಎಸ್ ಧೋನಿ ಪಡೆ 5ನೇ ಬಾರಿ ಟ್ರೋಫಿ ಗೆಲ್ಲಲು ನೆರವಾಗಿದ್ದ ಋತುರಾಜ್ ಗಾಯಕ್ವಾಡ್ 590 ರನ್ ಗಳಿಸಿ ಗಮನ ಸೆಳೆದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಅನುಭವಿ ಆಟಗಾರರಿಗೆ ಏಷ್ಯನ್ ಗೇಮ್ಸ್ ನಿಂದ ವಿಶ್ರಾಂತಿ ನೀಡಿದ್ದು, ರೋಹಿತ್ ಶರ್ಮಾ ಬದಲಿಗೆ ಋತುರಾಜ್ ಗಾಯಕ್ವಾಡ್‌ಗೆ ನಾಯಕನ ಜವಾಬ್ದಾರಿಯನ್ನು ಬಿಸಿಸಿಐ ಸೆಲೆಕ್ಟರ್ಸ್ ವಹಿಸಿದ್ದಾರೆ.

ಚೀನಾದ ಹಾಂಗ್‌ಝೌನಲ್ಲಿ ಸೆಪ್ಟಂಬರ್‌ 28 ರಿಂದ ಅಕ್ಟೋಬರ್‌ 8ರವರೆಗೆ ನಡೆಯಲಿರುವ ಏಷ್ಯಾ ಕ್ರೀಡಾಕೂಟದ ಬಗ್ಗೆ ಬಿಸಿಸಿಐ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಋತುರಾಜ್ ಗಾಯಕ್ವಾಡ್ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ.

ಚಿನ್ನದ ಪದಕ ಗೆಲ್ಲುವುದೇ ಗುರಿ
“ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಡುವುದು ನನ್ನ ಕನಸಾಗಿದೆ. ಇಂತಹ ಮಹಾ ಕ್ರೀಡಾಕೂಟದ ವೇದಿಕೆ ಮೇಲೆ ನಿಂತು ರಾಷ್ಟ್ರಗೀತೆ ಆಡುವುದು ನಿಜಕ್ಕೂ ಹೆಮ್ಮೆಯ ಸಂಗತಿ. ಇಂತಹ ಸದಾವಕಾಶ ಕಲ್ಪಿಸಿಕೊಟ್ಟ ಬಿಸಿಸಿಐ ಮ್ಯಾನೇಜ್ ಮೆಂಟ್ ಹಾಗೂ ಸೆಲೆಕ್ಟರ್ಸ್ ಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಮಹಾ ಟೂರ್ನಿಯಲ್ಲಿ ನಾಯಕತ್ವ ವಹಿಸಿರುವುದು ನಿಜಕ್ಕೂ ಗೌರವದ ಸಂಗತಿಯಾಗಿದ್ದು, ನನ್ನೊಂದಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ಅವಕಾಶವಾಗಿದೆ,” ಎಂದು ಋತುರಾಜ್ ಗಾಯಕ್ವಾಡ್ ಸಂತಸ ವ್ಯಕ್ತಪಡಿಸಿದ್ದಾರೆ.

ಯುವ ಆಟಗಾರರಿಗೆ ಉತ್ತಮ ಅವಕಾಶ
ಏಷ್ಯನ್ ಗೇಮ್ಸ್ ನಲ್ಲಿ ಸ್ಥಾನ ಪಡೆದಿರುವ ಬಹುತೇಕ ಆಟಗಾರರು ಯುವಕರಾಗಿದ್ದು, ಐಪಿಎಲ್ ಟೂರ್ನಿಯಲ್ಲಿ ಕಳೆದೆರಡು ವರ್ಷಗಳಿಂದ ಅವರೊಂದಿಗೆ ಗುರುತಿಸಿಕೊಂಡಿದ್ದು ಪಯಣ ಮಜಾವಾಗಿರುತ್ತದೆ ಎಂದು ಗಾಯಕ್ವಾಡ್ ಹೇಳಿದ್ದಾರೆ.

“ಏಷ್ಯನ್ ಗೇಮ್ಸ್ ಪಯಣ ನಿಜಕ್ಕೂ ಆಹ್ಲಾದಕರ ಆಗಿರುತ್ತದೆ ಎಂದು ನಾನು ನಿಸ್ಸಂದೇಹವಾಗಿ ಹೇಳಬಲ್ಲೆ. ತಂಡಕ್ಕೆ ಬಹುತೇಕ ಯುವ ಆಟಗಾರರೇ ಆಯ್ಕೆಯಾಗಿದ್ದು, ಕಳೆದೆರಡು ವರ್ಷಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅವರೊಂದಿಗೆ ಗುರುತಿಸಿಕೊಂಡಿದ್ದೇನೆ. ಅಲ್ಲದೆ ಕೆಲವು ಆಟಗಾರರೊಂದಿಗೆ ಭಾರತ ಹಾಗೂ ಭಾರತ ಎ ತಂಡದಲ್ಲೂ ಆಡಿದ ಅನುಭವ ಇದೆ. ಆದ್ದರಿಂದ ನಾನು ಸೇರಿದಂತೆ ಇತರ ಆಟಗಾರರಿಗೆ ಇದೊಂದು ಸುಂದರ ಪಯಣವಾಗಿರುತ್ತದೆ,” ಎಂದು ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಯಶಸ್ವಿ ಜೈಸ್ವಾಲ್ ಗೆ ಚಾನ್ಸ್
ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರನ್ ಹೊಳೆ ಹರಿಸಿದ್ದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದರ್ಪಣೆ ಮಾಡಿ ಚೊಚ್ಚಲ ಪಂದ್ಯದಲ್ಲೇ ಶತಕ (171 ರನ್) ಸಂಭ್ರಮ ಕಂಡಿದ್ದು, ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಹೊರಟಿದ್ದಾರೆ. ಏಷ್ಯನ್ ಗೇಮ್ಸ್ ಜೈಸ್ವಾಲ್ ಗೆ ಮತ್ತೊಂದು ದೊಡ್ಡ ವೇದಿಕೆಯಾಗಲಿದೆ. ಐಪಿಎಲ್ ತಾರೆಗಳಾದ ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದು, ಉತ್ತಮ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾದಲ್ಲಿ ಗುರುತಿಸಿಕೊಳ್ಳಲು ಸುವರ್ಣ ಅವಕಾಶ ಪಡೆದಿದ್ದಾರೆ.

2023ರ ಏಷ್ಯನ್‌ ಗೇಮ್ಸ್‌ಗೆ ಭಾರತ ಪುರುಷರ ಟಿ20 ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ಕೀಪರ್‌), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೇ, ಪ್ರಭಸಿಮ್ರನ್ ಸಿಂಗ್ (ವಿಕೆಟ್‌ಕೀಪರ್‌).

ಸ್ಟ್ಯಾಂಡ್‌ಬೈ ಆಟಗಾರರು: ಯಶ್ ಠಾಕೂರ್, ಸಾಯ್ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡ, ಸಾಯ್ ಸುದರ್ಶನ್.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

16 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago