ಲಾಹೋರ್: ಇಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯವು ನಾಕೌಟ್ ಪಂದ್ಯವಾಗಿ ಏರ್ಪಟ್ಟಿದೆ.
ಇಂಗ್ಲೆಂಡ್ ತಂಡ ಸೋಲಿಸಿ ಉತ್ಸಾಹದಲ್ಲಿರುವ ಅಫ್ಘಾನಿಸ್ತಾನ ತಂಡವು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಹೇಗಾದರೂ ಮಾಡಿ ಸೋಲಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಹಷ್ಮತ್‌ವುಲ್ಲಾ ಶಾಹಿದಿ ಬಳಗವು ಚಿಂತನೆ ನಡೆಸಿದೆ.
ಚಾಂಪಿಯನ್ಸ್ ಟ್ರೋಫಿಗೆ ಪದಾರ್ಪಣೆ ಮಾಡಿದ ಅಫ್ಗನ್ ಪಡೆ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 8 ರನ್‌ಗಳಿಂದ ಸೋಲಿಸಿ ಅಚ್ಚರಿಯ ಗೆಲುವು ಪಡೆದಿತ್ತು.
ಎಂಟು ರಾಷ್ಟ್ರಗಳ ಈ ಟೂರ್ನಿಯಲ್ಲಿ ನಾಲ್ಕರ ಘಟ್ಟ ತಲುಪಬೇಕಾದರೆ ಅಫ್ಗನ್ನರಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.
ಇತ್ತ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ 351 ರನ್‌ಗಳ ದೊಡ್ಡ ಮೊತ್ತ ಬೆನ್ನಟ್ಟಿ ಜಯಗಳಿಸಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು.
ಅಫ್ಗನ್ ತಂಡ 2 ಪಂದ್ಯಗಳಲ್ಲಿ ಒಂದನ್ನು ಗೆದ್ದ 2 ಅಂಕಗಳಿಸಿದ್ದರೆ, ಆಸ್ಟ್ರೇಲಿಯಾ ತಂಡ 3 ಅಂಕ ಹೊಂದಿದೆ. ಸೆಮಿಫೈನಲ್‌ಗೆ ತಲುಪಬೇಕಾದರೆ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.
ಪಂದ್ಯ ಆರಂಭ: 2:30 PM
ಸ್ಥಳ: ಗಡಾಫಿ ಸ್ಟೇಡಿಯಂ, ಲಾಹೋರ್



