ಕ್ರೀಡೆ

ನಾಕೌಟ್‌ ಆಗಿ ಏರ್ಪಟ್ಟ ಆಸ್ಟ್ರೇಲಿಯಾ-ಆಫ್ಗನ್‌ ನಡುವಿನ ಪಂದ್ಯ

ಲಾಹೋರ್‌: ಇಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯವು ನಾಕೌಟ್‌ ಪಂದ್ಯವಾಗಿ ಏರ್ಪಟ್ಟಿದೆ.

ಇಂಗ್ಲೆಂಡ್‌ ತಂಡ ಸೋಲಿಸಿ ಉತ್ಸಾಹದಲ್ಲಿರುವ ಅಫ್ಘಾನಿಸ್ತಾನ ತಂಡವು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಹೇಗಾದರೂ ಮಾಡಿ ಸೋಲಿಸಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಹಷ್ಮತ್‌ವುಲ್ಲಾ ಶಾಹಿದಿ ಬಳಗವು ಚಿಂತನೆ ನಡೆಸಿದೆ.

ಚಾಂಪಿಯನ್ಸ್‌ ಟ್ರೋಫಿಗೆ ಪದಾರ್ಪಣೆ ಮಾಡಿದ ಅಫ್ಗನ್‌ ಪಡೆ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು 8 ರನ್‌ಗಳಿಂದ ಸೋಲಿಸಿ ಅಚ್ಚರಿಯ ಗೆಲುವು ಪಡೆದಿತ್ತು.

ಎಂಟು ರಾಷ್ಟ್ರಗಳ ಈ ಟೂರ್ನಿಯಲ್ಲಿ ನಾಲ್ಕರ ಘಟ್ಟ ತಲುಪಬೇಕಾದರೆ ಅಫ್ಗನ್ನರಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಇತ್ತ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್‌ ವಿರುದ್ಧ 351 ರನ್‌ಗಳ ದೊಡ್ಡ ಮೊತ್ತ ಬೆನ್ನಟ್ಟಿ ಜಯಗಳಿಸಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು.

ಅಫ್ಗನ್‌ ತಂಡ 2 ಪಂದ್ಯಗಳಲ್ಲಿ ಒಂದನ್ನು ಗೆದ್ದ 2 ಅಂಕಗಳಿಸಿದ್ದರೆ, ಆಸ್ಟ್ರೇಲಿಯಾ ತಂಡ 3 ಅಂಕ ಹೊಂದಿದೆ. ಸೆಮಿಫೈನಲ್‌ಗೆ ತಲುಪಬೇಕಾದರೆ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅನಿವಾರ್ಯವಾಗಿದೆ.

ಪಂದ್ಯ ಆರಂಭ: 2:30 PM
ಸ್ಥಳ: ಗಡಾಫಿ ಸ್ಟೇಡಿಯಂ, ಲಾಹೋರ್‌

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

8 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago